1:04 PM Friday4 - December 2020
ಬ್ರೇಕಿಂಗ್ ನ್ಯೂಸ್
ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ…

ಇತ್ತೀಚಿನ ಸುದ್ದಿ

ಬೆಂಗಳೂರು ಶೂಟೌಟ್ ಗೂ ಹಿರಿಯಡ್ಕ ಹತ್ಯೆಗೂ ಲಿಂಕ್?

October 18, 2020, 8:49 AM

ಬೆಂಗಳೂರು(reporterkarnataka news): ರಾಜಧಾನಿ ಬೆಂಗಳೂರಿನಲ್ಲಿ ಬಾರ್ ಮಾಲೀಕ ಮನೀಷ್ ಶೆಟ್ಟಿ ಹತ್ಯೆ ಪ್ರಕರಣಕ್ಕೂ ಹಿರಿಯಡ್ಕದಲ್ಲಿ ನಡೆದ  ಕಿಶನ್ ಹೆಗ್ಡೆ ಹತ್ಯೆಗೆ ಸಂಬಂಧ ಇರುವ ಶಂಕೆ ವ್ಯಕ್ತವಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಶಯ ವ್ಯಕ್ತಪಡಿಸಿದ್ದಾರೆ.

ಕಿಶನ್ ಹೆಗ್ಡೆ ಹತ್ಯೆ ಆರೋಪಿಗಳಿಗೆ ಮನೀಷ್ ಶೆಟ್ಟಿ ಆರ್ಥಿಕ ಸಹಾಯ ಮಾಡಿದ್ದ ಎಂದು ಹೇಳಲಾಗುತ್ತಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಈ ಮಧ್ಯೆ ಮನೀಷ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು  ಶಶಿಕಿರಣ್, ನಿತ್ಯ, ಗಣೇಶ್ ಮತ್ತು ಅಕ್ಷಯ್ ಎಂದು ಗುರುತಿಸಲಾಗಿದೆ. ಶಶಿಕಿರಣ್ ಮಂಗಳೂರಿನಲ್ಲಿ ನಡೆದ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ.  ಮಾರಾಕಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಆರೋಪಿಗಳನ್ನು ಕರೆದೊಯುತ್ತಿದ್ದ ವೇಳೆ ಶಶಿಕಿರಣ್ ಮತ್ತು ಅಕ್ಷಯ್ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದು, ಇಬ್ಬರಿಗೂ ಗಾಯಗಳಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು