ಇತ್ತೀಚಿನ ಸುದ್ದಿ
ಬೆಂಗಳೂರು ಹಿಂಸಾಚಾರ: ಮಾಜಿ ಮೇಯರ್ ಸಂಪತ್ ರಾಜ್ ಮೊಬೈಲ್ ಸೀಜ್
August 21, 2020, 5:08 AM

ಬೆಂಗಳೂರ(reporterkarnataka news): ನಗರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರ ಮೊಬೈಲ್ ನ್ನು ಸಿಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅದರಲ್ಲಿರುವ ಮಾಹಿತಿ ಸಂಗ್ರಹಿಸಲು ಎಫ್ ಎಸ್ ಎಲ್ ಗೆ ಕಳುಹಿಸಲಾಗಿದೆ. ಮೊಬೈಲ್ ನಲ್ಲಿ ದೊರೆಯುವ ಮಾಹಿತಿ ನಿರ್ಣಾಯಕವಾಗಿದೆ. ಇದರ ಆಧಾರದಲ್ಲಿ ಪೊಲೀಸರು ಸಂಪತ್ ರಾಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಇದೇ ವೇಳೆ ಗಲಭೆ ಸಂಭವಿಸಿದ ಬೆಂಗಳೂರಿನ ಕೆ ಜಿ ಹಳ್ಳಿ ಮತ್ತು ಡಿ ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಹಿಂಪಡೆಯಲಾಗಿದೆ. ಆದರೆಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಮುಂದುವರಿಯಲಿದೆ