ಇತ್ತೀಚಿನ ಸುದ್ದಿ
ಬೆಂಗಳೂರು ಹಿಂಸಾಚಾರ: ಶಾಸಕರ ಸಂಬಂಧಿ ಆರೋಪಿ ನವೀನ್ ಬಂಧನ
August 12, 2020, 3:02 AM

ಬೆಂಗಳೂರು(reporterkarnatakanews): ರಾಜಧಾನಿ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಅವರ ಸಂಬಂಧಿ ನವೀನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಮಾಹಿತಿ ಬಹಿರಂಗಪಡಿಸಿದ್ದಾರೆ.

ನವೀನ್ ಸಾಮಾಜಿಕ ಜಾಲ ತಾಣದಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯದಿಂದಾಗಿ ಗಲಭೆ ಸ್ಫೋಟಗೊಂಡಿತ್ತು ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಡಿ ಜೆ ಹಳ್ಳಿ ಮತ್ತು ಕೆ . ಜೆ. ಹಳ್ಳಿಯಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. 250ಕ್ಕೂ ಹೆಚ್ಚು ದುಷ್ಕರ್ಮಿಗಳು ಎರಡು ಪೊಲೀಸ್ ಠಾಣಾ ವ್ಯಾಪಿಯಲ್ಲಿ ಹಿಂಸಾಚಾರದಲ್ಲಿ ನಿರತರಾಗಿದ್ದರು.
ಶಾಂತಿ ಕಾಪಾಡಲು ಜನರು ಸಹಕಾರ ನೀಡಬೇಕು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಮನವಿಮಾಡಿದ್ದಾರೆ.