7:09 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಬೆಂಗ್ರೆ ಕೋಸ್ಟಲ್ ಬರ್ತ್ : ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಡಿವೈಎಫ್ಐ ಆಗ್ರಹ

December 14, 2020, 6:12 PM

ಮಂಗಳೂರು(reporterkarnataka news):

ಮಂಗಳೂರು ನಗರದ ನದಿ ಹಾಗೂ ಕಡಲ ದಂಡೆಯಲ್ಲಿರುವ ಬೆಂಗ್ರೆ ಗ್ರಾಮದಲ್ಲಿ ಜನರನ್ನು ಕತ್ತಲಲ್ಲಿಟ್ಟು ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ಸರಕಾರ ಮುಂದಾಗಿದ್ದು, ಇದರಿಂದ ಸ್ಥಳೀಯ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಜಿಲ್ಲಾಡಳಿತ ತಕ್ಷಣವೇ ಗ್ರಾಮಸ್ಥರ ಸಭೆ ಕರೆದು ಪೂರ್ಣ ಮಾಹಿತಿ ನೀಡಿ ಸಾಧಕ, ಬಾಧಕಗಳ ಕುರಿತು ಚರ್ಚಿಸಬೇಕು ಎಂದು ಡಿವೈಎಫ್ಐ ದಕ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಬೆಂಗ್ರೆ ಗ್ರಾಮದಲ್ಲಿ ಸಾವಿರಾರು ಮನೆಗಳಿದ್ದು, ಜನ ನಿಬಿಡತೆಯಿಂದ ಕೂಡಿದೆ. ಮೀನುಗಾರಿಕೆಗೆ ಸಂಬಂಧಿಸಿದ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಬಡವರೇ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ತಲೆಮಾರುಗಳಿಂದ ಇಲ್ಲಿ ವಾಸ ಇದ್ದರೂ ಇಲ್ಲಿಯವರಗೆ ಕುಡಿಯುವ ನೀರು, ಒಳಚರಂಡಿ, ಆರೋಗ್ಯ, ಸಾರಿಗೆ ಮುಂತಾದ ಮೂಲಭೂತ ಸೌಲಭ್ಯಗಳಿಂದ ಇಲ್ಲಿನ ಜನತೆ ವಂಚಿತರಾಗಿದ್ದಾರೆ. ಸಿ ಆರ್ ಝಡ್ ಕಾಯ್ದೆಯ ನೆಪವನ್ನು ಮುಂದಿಟ್ಟು ಗ್ರಾಮಸ್ಥರನ್ನು ಸದಾ ಅತಂತ್ರವಾಗಿಯೇ ಇರಿಸಲಾಗಿದೆ. ಈಗ ಇಲ್ಲಿನ ನಿಬಿಡ ಜನ ವಸತಿ ಪ್ರದೇಶಕ್ಕೆ ತಾಗಿಕೊಂಡೇ 100 ಕೋಟಿ ವೆಚ್ಚದಲ್ಲಿ ಕೋಸ್ಟಲ್ ಬರ್ತ್  ನಿರ್ಮಾಣ, ಕ್ಯಾಪಿಟಲ್‌ ಡ್ರೆಜಿಂಗ್ ಕಾಮಗಾರಿ ಆರಂಭಗೊಳ್ಳುತ್ತಿದೆ. ಸ್ಥಳೀಯ ಗ್ರಾಮಸ್ಥರಿಗೆ ಯಾವ ಮಾಹಿತಿಯನ್ನು ನೀಡದೆ ಏಕಾಏಕಿ ಶಿಲನ್ಯಾಸ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಇದು ಖಂಡನೀಯ. ಈಗ ಗುರುತಿಸಲಾದ ಜಾಗದಲ್ಲಿ ಹತ್ತಕ್ಕೂ ಹೆಚ್ಚು ಮನೆಗಳು, ಸ್ಥಳೀಯ ಮೀನುಗಾರರು ಮೀನು ಒಣಗಿಸುವ ಏಳೆಂಟು ಟೆಂಟ್ ಗಳು ಇವೆ. ಸ್ಥಳೀಯ ಸರಕಾರಿ ಪ್ರೌಢ ಶಾಲೆಯ ಅರ್ಧಕ್ಕೂ ಹೆಚ್ಚು ಜಮೀನು ಈಗ ಗುರುತಿಸಲಾದ ನಕ್ಷೆಯ ಒಳಗಡೆ ಸೇರಿಕೊಂಡಿದೆ. ಸ್ಥಳೀಯರಿಗೆ, ಯೋಜನೆಯಿಂದ ಸಂತ್ರಸ್ಥರಾಗುವವರಿಗೆ ಯಾವುದೆ ಮಾಹಿತಿ ನೀಡದೆ ಇಂತಹ ಯೋಜನೆಯ ನಿರ್ಮಾಣಕ್ಕೆ ಮುಂದಾಗಿರುವುದು ಸ್ಥಳೀಯರಲ್ಲಿ ಆತಂಕ, ಭೀತಿಗೆ ಕಾರಣವಾಗಿದೆ. ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತರು ಇಂತಹ ಸಂದರ್ಭದಲ್ಲಿ ಜನರ ಜೊತೆಗೆ ನಿಲ್ಲದೆ, ಅವರನ್ನು ಕತ್ತಲೆಯಲ್ಲಿಟ್ಟು ಅಭಿವೃದ್ದಿಯ ಹೆಸರಿನಲ್ಲಿ ಎಲ್ಲವನ್ನು ನಿಗೂಢವಾಗಿ ನಡೆಸಲು ಮುಂದಾಗಿರುವುದು ಅವರ ಜನವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತದೆ. ಇದು ಪ್ರಜಾಸತ್ತಾತ್ಮಕ ವ್ಯವಸ್ಥೆಯೊಂದು ನಡೆದುಕೊಳ್ಳುವ ವಿಧಾನ ಅಲ್ಲ. ಜಿಲ್ಲಾಡಳಿತ ತಕ್ಷಣವೇ ಗ್ರಾಮಸ್ಥರ ಸಭೆ ಕರೆದು, ಪೂರ್ಣ ಮಾಹಿತಿ ನೀಡಿ, ಅವರ ಆಕ್ಷೇಪಗಳನ್ನು ಪರಿಗಣಿಸಬೇಕು, ಸಮಸ್ಯೆಗಳನ್ನು ಬಗೆ ಹರಿಸಿ ಮುಂದುವರಿಯಬೇಕು ಎಂದು ಡಿವೈಎಫ್ಐ ದ ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು