2:58 PM Friday26 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ…

ಇತ್ತೀಚಿನ ಸುದ್ದಿ

ಬೆಂಗರೆ ಭೂಮಿಯನ್ನು ಖಾಸಗಿ ಕಂಪನಿಗಳಿಗೆ ನೀಡುವ ಯೋಜನೆ ವಿರುದ್ಧ ಭಾರಿ ಪ್ರತಿಭಟನೆ

November 7, 2020, 12:07 PM

ಮಂಗಳೂರು(reporterkarnataka news):

ಬೆಂಗರೆ ಗ್ರಾಮದ ಜನರನ್ನು ಮೂಲಭೂತ ಸೌಕರ್ಯಗಳಿಂದ ವಂಚಿಸಿ ಕೇವಲ ಪ್ರವಾಸೋದ್ಯಮದ ಹೆಸರಲ್ಲಿ ಸ್ಥಳೀಯ ಜನರನ್ನು ಸಮುದ್ರದಿಂದ ಬೇರ್ಪಡಿಸುವ, ಶ್ರೀಮಂತರ‌ ಮೋಜಿನಾಟಕೆ ಬೆಲೆಬಾಳುವ ಭೂಮಿಯನ್ನು ಖಾಸಗೀ ಕಂಪೆನಿಗಳಿಗೆ ಧಾರೆಯೆರೆಯುವ ಯೋಜನೆಯನ್ನು ವಿರೋಧಿಸಿ  ಡಿವೈಎಫ್ಐ ಬೆಂಗರೆ ಗ್ರಾಮ ಸಮಿತಿಯಿಂದ ಬೆಂಗರೆ ಕಡಲ ಕಿನಾರೆಯಲ್ಲಿ ಪ್ರತಿಭಟನಾ‌ ಪ್ರದರ್ಶನ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮಾತನಾಡಿ, ಬೆಂಗರೆ ಪ್ರದೇಶವನ್ನು ಅಭಿವೃದ್ಧಿ ಪಡಿಸುವೆಂದು ಕೇವಲ ಬೀಚ್ ಗಳನ್ನಷ್ಟೇ ಅಭಿವೃದ್ಧಿ ಪಡಿಸಿದರೆ‌ ಅದು ನಿಜವಾದ ಅಭಿವೃದ್ಧಿ ಅಲ್ಲ. ಇಲ್ಲಿ ನೂರಾರು ವರುಷಗಳಿಂದ ನೆಲೆನಿಂತಿರುವ ನಿವಾಸಿಗಳ ಕನಿಷ್ಟ ಮೂಲಭೂತ ಸೌಕರ್ಯಗಳನ್ನು ಈಡೇರಿಸುವುದೇ ನಿಜವಾದ ಅಭಿವೃದ್ಧಿ. ಕಳೆದ ಹಲವಾರು ವರುಷಗಳಿಂದ ಈ ಬೆಂಗರೆಯ ನಿವಾಸಿಗಳ ಬಹುಮುಖ್ಯ ಬೇಡಿಕೆ ಮಹಾನಗರ ಪಾಲಿಕೆ ಈವರೆಗೂ ಈಡೇರಿಸಲಿಲ್ಲ. ಕುಡಿಯುವ ನೀರಿನ ಸಂಪರ್ಕ ಕೊಟ್ಟಿಲ್ಲ, ಹಕ್ಕುಪತ್ರವಿಲ್ಲ, ಡ್ರೈನೇಜ್ ಇಲ್ಲ, ಚರಂಡಿ ಇಲ್ಲ, ಆಟದ ಮೈದಾನ ಇಂತಹ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಅಭಿವೃದ್ಧಿ ಹೆಸರಲ್ಲಿ ಇಲ್ಲಿನ ಫಲವತ್ತಾದ ಭೂಮಿಯನ್ನು ಖಾಸಗೀ ಧಣಿಗಳಿಗೆ ಮಾರಲು ಹೊರಟ ಯೋಜನೆಯನ್ನು ಪ್ರಾರಂಭಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದರು.

ಶಾಸಕರು , ಜನಪ್ರತಿನಿಧಿಗಳು ಈ ಊರಿಗೆ ಚುನಾವಣೆ ಸಂದರ್ಭ ಕೊಟ್ಟ ಆಶ್ವಾಸನೆಗಳೆಲ್ಲವು ಏನಾದವು. ಈ ಹಿಂದೆಯೂ ಗಾಲ್ಫ್‌ ಕ್ಲಬ್ ನಿರ್ಮಾಣದ ವಿರುದ್ದ ರಾಜಿರಹಿತ ಹೋರಾಟಗಳನ್ನು ಮಾಡಿದ್ದೇವೆ. ಇಂತಹದೇ ಯೋಜನೆ ಮತ್ತೊಮ್ಮೆ ಕೈಗೊಂಡರೆ ಅದರ ವಿರುದ್ದವು ಹೋರಾಟಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದರು.

ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ಭೌಗೋಳಿಕವಾಗಿ ಸುಂದರವಾಗಿರುವ ಬೆಂಗರೆ ಪ್ರದೇಶದ ಜನರ ಬದುಕು ಮಾತ್ರ ಸುಂದರವಾಗಿಲ್ಲ. ಮಂಗಳೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತ ಬೆಂಗರೆ ಪ್ರದೇಶದಲ್ಲಿ ಬದುಕುವ ಜನರ ಪ್ರಶ್ನೆಗಳನ್ನು ಕೇಳಲು ಈವರೆಗೂ ಬೆಂಗರೆಗೆ ಕಾಲಿಟ್ಟಿಲ್ಲ. ಬರೇ ಶ್ರೀಮಂತರ ಮೋಜಿನಾಟದ ಯೋಜನೆಗಳಿಗೆ ಭೇಟಿಕೊಡಲು ಇವರುಗಳಿಗೆ ಬೇಕಾದಷ್ಟು ಸಮಯಗಳಿವೆ. ಇಲ್ಲಿನ ನಿವಾಸಿಗಳಿಗೆ ಕುಡಿಯುವ ನೀರಿನಿಂದ ಹಿಡಿದು ಹಕ್ಕುಪತ್ರ, ಡ್ರೈನೇಜ್, ಸಾರಿಗೆ, ಆರೋಗ್ಯ ಕೇಂದ್ರ , ಶಾಲೆ ಎಲ್ಲದರಿಂದಲೂ ವಂಚಿತರಾಗಿದ್ದಾರೆ. ನಗರ ಪಾಲಿಕೆಯ ಯಾವುದೇ ಅಭಿವೃದ್ಧಿ ಕಾಮಗಾರಿ ಇಲ್ಲಿ ನಡೆಯುವುದಿಲ್ಲ ಆದರೆ ಈ ಜನರಿಂದ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪ್ರತೀ ವರುಷ ವಸೂಲಿ ಮಾಡುವುದು ನಿಮ್ಮದೆಂತಹ ನೀತಿ ಎಂದು ಪ್ರಶ್ನಿಸಿದರು. 

ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಯ ಮುಖಂಡರಾದ ವಿಲ್ಲಿ ವಿಲ್ಸನ್, ಮೋನಾಕ, ಡಿವೈಎಫ್ಐ ಜಿಲ್ಲಾ ಮುಖಂಡರಾದ ಎ.ಬಿ ನೌಶದ್ ಡಿವೈಎಫ್ಐ ಬೆಂಗರೆ ಗ್ರಾಮ ಸಮಿತಿ ಅದ್ಯಕ್ಷರಾದ ಹನೀಫ್ ಬೆಂಗರೆ, ಕಾರ್ಯದರ್ಶಿ ರಿಜ್ವಾನ್, ಅಸ್ಲಂ, ನಾಸಿರ್, ತೌಸೀಫ್, ತಸ್ರೀಫ್, ಸಮದ್, ಬಿಲಾಲ್, ಜಮಾಹತ್ ಕಮಿಟಿ ಸದಸ್ಯ ಆಶ್ರಫ್, ಬಶೀರ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು