ಇತ್ತೀಚಿನ ಸುದ್ದಿ
ಭಾರತ್ ಬಂದ್ ಗೆ ದ.ಕ.ಜಿಲ್ಲಾ ಕಾಂಗ್ರೆಸ್ ಬೆಂಬಲ: ನಂತೂರು ಜಂಕ್ಷನ್ ನಲ್ಲಿ ಹೆದ್ದಾರಿ ತಡೆ ಪ್ರತಿಭಟನೆ
December 8, 2020, 12:36 PM

ಮಂಗಳೂರು(reporterkarnataka news):
ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ‘ಭಾರತ್ ಬಂದ್’ ಬೆಂಬಲಿಸಿ
ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಬೆಳಗ್ಗೆ ನಗರದ ನಂತೂರ್ ಜಂಕ್ಷನ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು-ಶಾಸಕರು, ಜಿಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದು, ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಧ್ವಜದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.