ಇತ್ತೀಚಿನ ಸುದ್ದಿ
ಭಾರತ ಬಂದ್ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಎಂದಿನಂತೆ ವಾಹನಗಳ ಓಡಾಟ, ಜನಜೀವನ ಸಹಜ ಸ್ಥಿತಿ
December 8, 2020, 12:27 PM

ಮಂಗಳೂರು(reporterkarnataka news) ಕೇಂದ್ರ ಸರಕಾರದ ಮೂರು ಕೃಷಿ ಮಸೂದೆಯನ್ನು ವಿರೋಧಿಸಿ
ಇಂದು ಕರೆನೀಡಿದ ಭಾರತ ಬಂದ್ ಗೆ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಯಾವುದೇ ಪೂರಕ
ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಎರಡೂ ಜಿಲ್ಲೆಗಳಲ್ಲಿ ಜನಜೀವನ ಸಹಜ ಸ್ಥಿತಿಯಲ್ಲಿದೆ. ವಾಹನಗಳ ಓಡಾಟ ಎಂದಿನಂತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನಗರವಾದ ಮಂಗಳೂರಿನಲ್ಲಿ ಎಂದಿನಂತೆ ಸಿಟಿ ಬಸ್, ಖಾಸಗಿ ಸರ್ವಿಸ್ ಬಸ್ ಹಾಗೂ ಕೆಎಸ್ಸಾರ್ಟಿಸಿ ಬಸ್ ಗಳು ಓಡಾಟ ನಡೆಸುತ್ತಿವೆ. ಆಟೋರಿಕ್ಷಾಗಳು ಕೂಡ ರಸ್ತೆಗಿಳಿದಿವೆ. ಹಾಗೆ ಜಿಲ್ಲೆಯ ಇತರ ಪ್ರಮುಖ ಪಟ್ಟಣಗಳಾದ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿಗಳಲ್ಲಿ ಕೂಡ ಜನ ಜೀವನ ಸಹಜ ಸ್ಥಿತಿಯಲ್ಲಿದೆ. ನೆರೆಯ ಉಡುಪಿ ಜಿಲ್ಲೆಯಲ್ಲಿಯೂ ಬಂದ್ ಗೆ ಯಾವುದೇ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಉಭಯ ಜಿಲ್ಲೆಯ ಹಲವು ಕಡೆಗಳಲ್ಲಿ ರಸ್ತೆ ತಡೆ ಪ್ರತಿಭಟನೆಗಳು ನಡೆದಿವೆ.