11:46 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್…

ಇತ್ತೀಚಿನ ಸುದ್ದಿ

ಭಾರತ್ ಬಂದ್: ದ.ಕ. ಸಹಿತ ಕರಾವಳಿಯಲ್ಲಿ ಬೆಂಬಲ ಇಲ್ಲ; ಮಾಮೂಲಿ ವಾಹನ ಓಡಾಟ, ಸಹಜ ಜನಜೀವನ; ಕೆಲವು ಕಡೆ ಪ್ರತಿಭಟನೆ

27/09/2021, 10:50

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ವಾಹನ ಸಂಚಾರ ಮಾಮೂಲಿಯಾಗಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ.

ಮಂಗಳೂರಿನಲ್ಲಿ ಸಿಟಿ ಬಸ್, ಸರ್ವಿಸ್ ಬಸ್, ಕೆಎಸ್ಸಾರ್ಟಿಸಿ, ಆಟೋ, ಟ್ಯಾಕ್ಸಿ ರೋಡಿಗಿಳಿದಿವೆ. ಅಂಗಡಿ- ಮುಂಗಟ್ಟು ತೆರೆದುಕೊಂಡಿವೆ. ವ್ಯಾಪಾರ – ವಹಿವಾಟು ಎಂದಿನಂತೆ ಸಾಗುತ್ತಿದೆ.

ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳ ಕಚೇರಿ ತೆರೆದುಕೊಂಡಿವೆ. ಆದರೆ ಜಿಲ್ಲೆಯ ಹಲವೆಡೆ ಕಾಂಗ್ರೆಸ್, ಎಡಪಕ್ಷ, ಪಾಪ್ಯುಲರ್ ಫ್ರಂಟ್ ಸೇರಿದಂತೆ ಸಮಾನಮನಸ್ಕ ಪಕ್ಷಗಳು ಬಂದ್ ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿದವು.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು