7:28 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಫೈಸಲ್ ನಗರದಲ್ಲಿ ಆವರಣವಿಲ್ಲದ ಬಾವಿಗೆ ಬಿದ್ದು ಯುವಕ ಸಾವು

January 4, 2021, 9:58 PM

ಮಂಗಳೂರು(reporterkarnataka news): 

ನೆಂಟರ ಮನೆಗೆ ಬಂದ ಯುವಕನೊಬ್ಬ ಆವರಣವಿಲ್ಲದ ಬಾವಿಗೆ ಬಿದ್ದು ಸಾವನಪ್ಪಿದ ದಾರುಣ ಘಟನೆ ಫೈಸಲ್ ನಗರದಲ್ಲಿ ಸೋಮವಾರ ನಡೆದಿದೆ.

ಮೂಲತಃ ಕುದುರೆಮುಖದ ನಿವಾಸಿಯಾದ ಅಜಿತ್ (22) ತನ್ನ ನೆಂಟರ ಮನೆಗೆ ಹೋಗುವಾಗ ದಾರಿಯಲ್ಲಿ ತಡೆ ಗೋಡೆ ಇಲ್ಲದ ಬಾವಿಗೆ ಬಿದ್ದಿದ್ದಾರೆ.

ಯುವಕನನ್ನು ಪಡೀಲ್ ನ  ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂಕನಾಡಿ ಠಾಣೆಯ ನೀರೀಕ್ಷಕರು ಹಾಗೂ ಪೊಲೀಸ್ ಉಪ ನೀರೀಕ್ಷಕ ರಘು ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ. 

ಕೂಲಿ ಕಾರ್ಮಿಕನಾದ ಮೃತ ದುರ್ದೈವಿ ಅವರು ಎಮ್ಮೆಕೆರೆಯಲ್ಲಿ ವಾಸಿಸುತ್ತಿದ್ದರು.
ಊರಿನವರ ಸಹಕಾರದಿಂದ ಯುವಕನನ್ನು ಮೇಲೆತ್ತುವ ಕಾರ್ಯ ನಡೆದಿದೆ.

ಈ ಸಂದರ್ಭದಲ್ಲಿ ಇತ್ತೀಚಿಗೆ ಅಷ್ಟೇ ಪೊಲೀಸ್ ಇಲಾಖೆಯ 112 ವಾಹನವನ್ನು ಜನರ ಸಹಾಯವಾಣಿಗೆಂದು ನಿಗದಿಪಡಿಸಲಾಗಿತ್ತು.ಆದರೆ ಅದು ಅಗತ್ಯದ ಸಂದರ್ಭದಲ್ಲಿ ನೇರವಾಗಿ ಸಂಪರ್ಕಕ್ಕೆ ಸಿಗುತ್ತಿಲ್ಲ.112ಕ್ಕೆ ಸತತ 16 ಕರೆ ಮಾಡಿದರೂ ಕರೆ ಸಂಪರ್ಕ ಸಿಗಲಿಲ್ಲ. ಬಳಿಕ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದರು. ಆದರೆ ಅಗ್ನಿಶಾಮಕ ತಡವಾಗಿ ಬಂದಿದ್ದು. ಅದಾಗಲೇ ಸಾರ್ವಜನಿಕರು ಯುವಕನ್ನು ಮೇಲಕ್ಕೆತ್ತಿದ್ದರು ಎಂದು ಸ್ಥಳೀಯ ಕಾರ್ಪೊರೇಟರ್ ಅಶ್ರಫ್ ಮಾಹಿತಿ ನೀಡಿದ್ದಾರೆ. ಮೃತ ಯುವಕ ಕೂಲಿ ಕಾರ್ಮಿಕರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೆಚ್ಚವನ್ನು ಅಶ್ರಫ್ ಭರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು