6:26 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯಿದೆ ವಿರುದ್ದ ಸೆ.28 ಕರ್ನಾಟಕ ಬಂದ್

September 23, 2020, 10:22 PM

ಬೆಂಗಳೂರು( reporterkarnataka news): ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ವಿಧೇಯಕಗಳನ್ನು ವಿರೋಧಿಸಿ ರಾಜ್ಯದ ವಿವಿಧ ರೈತಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಸೆ.28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಊಬರ್ ಚಾಲಕರ ಸಂಘ, ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆ ಸೇರಿದಂತೆ ಒಟ್ಟ 32 ಸಂಘಟನೆಗಳು ಈ ಬಂದ್‌ಗೆ ಬೆಂಬಲ ಸೂಚಿಸಿವೆ.

ಈ ಕುರಿತು ಬುಧವಾರ ಸುದ್ದಿಗಾರ ಜತೆ ಮಾತನಾಡಿದ ರೈತ ಸಂಘದ ಅಧ್ಯಕ್ಷ ಕೋಡಿ ಹಳ್ಳಿ ಚಂದ್ರಶೇಖರ್, ಸೆ.25ರಂದು ಕರ್ನಾಟಕ ಬಂದ್ ನಡೆಸುವ ಬದಲಾಗಿ ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಕರ್ನಾಟಕ ಬಂದ್ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಎಪಿಎಂಸಿ ತಿದ್ದುಪಡಿ ಕಾಯ್ದೆ ರೈತರಿಗೆ ಪೂರಕವಾದಂತ ಕಾಯ್ದೆ ಅಲ್ಲ. ಕಾರ್ಪೋರೇಟ್ ಕಂಪನಿಗಳಿಗೆ ಅವಕಾಶ ಮಾಡಿಕೊಡುವಂತ ಕಾಯ್ದೆಯಾಗಿದೆ. ಇವರು ಕಾರ್ಪೋರೇಟ್ ಕಂಪನಿಗಳ ಪರವೇ ಹೊರತು, ಜನಸಾಮಾನ್ಯ ರೈತರ ಪರವಾದವರಲ್ಲ ಎಂದು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಭೂಸುಧಾರಣೆ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ವಿರೋಧಿ ಕಳೆದ ಎರಡ್ಮೂರು ದಿನಗಳಿಂದ ರೈತ ಪರ ಸಂಘಟನೆಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು