ಇತ್ತೀಚಿನ ಸುದ್ದಿ
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ?
January 25, 2021, 5:19 PM

ಬೆಂಗಳೂರು(reporterkarnataka news): ಬಿಗ್ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ
ಸೋಮವಾರ ಮಾಗಡಿ ರಸ್ತೆಯ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಗಡಿ ರಸ್ತೆಯ ಜನಪ್ರಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಜಯಶ್ರೀ ರಾಮಯ್ಯ ಅವರು ಈ ಹಿಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವಿಚಾರವಾಗಿ ನಟ ಸುದೀಪ್ ಕೂಡ ಬುದ್ಧಿ ಹೇಳಿದ್ದರು. ಆದರೆ ಸೋಮವಾರ ಮತ್ತೆ ಆತ್ಮಹತ್ಯೆಗೆ ಯತ್ನಿಸಿ
ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.