10:08 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಬಿಹಾರದ ಚುನಾವಣೆ ಪ್ರಣಾಳಿಕೆಯಂತಿದೆ: ಕೇಂದ್ರ ಬಜೆಟ್ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

01/02/2025, 18:14

ಬೆಳಗಾವಿ(reporterkarnataka.com): ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.
ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು