4:39 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

ಬೆಂಗಳೂರು ಡ್ರಗ್ಸ್ ತನಿಖೆ: ಕೇರಳದಲ್ಲಿ ಕೂಡ ವಿಚಾರಣೆ

September 9, 2020, 2:24 AM

ಕೊಚ್ಚಿ(reporterkarnataka news): ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಮಾದಕ ದ್ರವ್ಯ ಜಾಲದ ತನಿಖೆ ಕೇರಳಕ್ಕೂ ವ್ಯಾಪಿಸಿದೆ. ಈ ಸಂಬಂಧ  ರಾಜ್ಯ ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೇಶ್ ಕೊಡಿಯೇರಿಗೆ ವಿಚಾರಣೆ ಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.

ಇಂದು ಕೊಚ್ಚಿಯಲ್ಲಿರುವ ಇಡಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ. ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಅನೂಪ್ ಮೊಹಮ್ಮದ್ ಜತೆ ಬಿನೇಶ್ ಕೊಡಿಯೇರಿ ವಾಣಿಜ್ಯ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ.

ಬೆಂಗಳೂರಿನಲ್ಲಿ ಹೋಟೆಲ್ ಆರಂಭಿಸಲು ಬಿನೇಶ್ ಕೊಡಿಯೇರಿ,  ಅನೂಪ್ ಮೊಹಮ್ಮದ್ ಗೆ ಆರ್ಥಿಕ ಸಹಾಯ ಮಾಡಿದ್ದ ಎಂದು ಕೂಡ ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು