4:54 AM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಬಿಜೆಪಿ, ಆರೆಸ್ಸೆಸ್ಸಿಗೂ ಕಮಿಷನ್ ನಲ್ಲಿ ಪಾಲಿದೆ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪ

27/08/2022, 20:03

ಮೈಸೂರು(reporterkarnataka.com): ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

ಬಿಜೆಪಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 8 ವರ್ಷಗಳಾಗಿವೆ. ನವದೆಹಲಿಯಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕಚೇರಿ ನಿರ್ಮಿಸುವ ಜೊತೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟಲಾಗುತ್ತಿದೆ. ಇದಕ್ಕೆ ಹಣ ಎಲ್ಲಿಂದ ಬಂತು? ಕಮಿಷನ್‌ನಲ್ಲಿ ಪಾಲು ಹೋಗುತ್ತಿರುವುದರಿಂದ ಇದೆಲ್ಲವೂ ಸಾಧ್ಯವಾಗುತ್ತಿದೆ’ ಎಂದು ಮೈಸೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಗುತ್ತಿಗೆದಾರರಿಂದ ಪಡೆಯುತ್ತಿರುವ ಕಮಿಷನ್‌ನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೂ ಪಾಲು ಹೋಗುತ್ತಿದೆ. ಗುತ್ತಿಗೆದಾರರಿಂದ ಶೇ. 40ರಷ್ಟು ಕಮಿಷನ್ ಪಡೆಯುತ್ತಿರುವ ಆರೋಪದ ಕುರಿತು ಸ್ವತಂತ್ರ ಆಯೋಗದಿಂದ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರರಾ ಎಂಬ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಶೇ 40ರಷ್ಟು ಕಮಿಷನ್ ವಿಚಾರದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವರ್ಷದ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಹೀಗಾಗಿ, ಮತ್ತೊಮ್ಮೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರೇ ಎಂದು ಕೇಳುವ ಬದಲಿಗೆ ಸ್ವತಂತ್ರ ಆಯೋಗವನ್ನು ರಚಿಸಿ ತನಿಖೆಗೆ ಆದೇಶಿಸಲು ಮುಖ್ಯಮಂತ್ರಿ ಕ್ರಮ ವಹಿಸಬೇಕು. ತನಿಖೆ ನಡೆಸಿದರೆ ಸತ್ಯಾಂಶ ಹೊರಬೀಳಲಿದೆ ಎನ್ನುವ ಭಯದಿಂದ ಬಿಜೆಪಿಯವರು ಆಪಾದನೆಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು. ಪ್ರಧಾನಿಯು ಭ್ರಷ್ಟರನ್ನು ರಕ್ಷಿಸದೆ, ತನಿಖೆಗೆ ಆದೇಶಿಸಲಿ’ ಎಂದು ಸವಾಲು ಹಾಕಿದರು.

ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಯಾವ ನಾಯಕರೂ ಭಾಗಿಯಾಗಿಲ್ಲ.

ವೀರ ಸಾವರ್ಕರ್ ನಾಸ್ತಿಕನಾಗಿದ್ದ. ಗಣೇಶೋತ್ಸವದಲ್ಲಿ ಫೋಟೊ ಇಡುವುದು ಹಿಂದೂ ಧರ್ಮಕ್ಕೆ ಎಸಗುವ ಅಪಚಾರವಾಗುತ್ತದೆ. ಗಣೇಶೋತ್ಸವ ದೇವರಮೂರ್ತಿ ಜೊತೆ ನಾಸ್ತಿಕನ ಫೋಟೊ ಹಾಸ್ಯಾಸ್ಪದ. ಸಾವರ್ಕರ್ ಆತ್ಮ ಚರಿತ್ರೆ ಸರಿಯಾಗೆ ಓದದೆ ಇರುವವರು ರಾಜಕೀಯ ಹಿತಾಸಕ್ತಿಗಾಗಿ ಫೋಟೊ ಇಡುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು