2:03 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಬಿಜೆಪಿ ಕಾರ್ಯಕರ್ತರು ಭವಿಷ್ಯದ ನಾಯಕರಾಗಬೇಕು: ಡಾ. ವೇಣುಗೋಪಾಲ್ 

November 22, 2020, 9:07 AM

ಶ್ರೀನಿವಾಸಪುರ(reporterkarnataka news): ಬಿಜೆಪಿ ಕಾರ್ಯಕರ್ತರು ಪ್ರಶಿಕ್ಷಣ ಪಡೆದು ಭವಿಷ್ಯದ ನಾಯಕರಾಗಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್‌.ವೇಣುಗೋಪಾಲ್‌ ಹೇಳಿದರು.

  ಪಟ್ಟಣದ ಹೊರವಲಯದ ವಿಐಪಿ ಪಬ್ಲಿಕ್‌ ಸ್ಕೂಲ್‌ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಬಿಜೆಪಿ ಮಂಡಲ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಮಾತನಾಡಿ, ಕಾರ್ಯಕರ್ತರು ಪಕ್ಷದ ನಿಜವಾದ ಆಸ್ತಿ. ಸಾಂಘಿಕ ಪ್ರಯತ್ನದ ಮೂಲಕ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು ಎಂದು ಹೇಳಿದರು.

ಬಿಜೆಪಿ ಅತಿ ಹೆಚ್ಚು ಸಂಖ್ಯೆಯ ಕಾರ್ಯಕರ್ತರನ್ನು ಒಳಗೊಂಡಿರುವ ಏಕೈಕ ರಾಜಕೀಯ ಪಕ್ಷವಾಗಿದೆ. ವಿಚಾರ ಮರೆತು ಸ್ವಾರ್ಥಕ್ಕೆ ಇಂಬುಗೊಡು ಯಾವುದೇ ಪಕ್ಷಕ್ಕೆ ಭವಿಷ್ಯ ಇರುವುದಿಲ್ಲ. ಕಾಂಗ್ರೆಸ್ ಅದಕ್ಕೆ ಉತ್ತಮ ನಿದರ್ಶನವಾಗಿದೆ. ವಿಚಾರದಿಂದ ದೂರವಾಗಿ ವ್ಯಕ್ತಿ ಪೂಜೆಗೆ ಇಳಿದ ಪರಿಣಾಮವಾಗಿ ಲೋಕಸಭೆಯಲ್ಲಿ 40 ಸ್ಥಾನಗಳಿಗೆ ತೃಪ್ತಿ ಪಡಬೇಕಾಯಿತು. ಬಿಜೆಪಿ ವಿಚಾರಗಳಿಗೆ ಕಟ್ಟು ಬಿದ್ದುದರ ಫಲವಾಗಿ 303 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಸಾಧ್ಯವಾಯಿತು ಎಂದು ಅಭಿಪ್ರಾಯಪಟ್ಟರು.

  ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡಂತೆ ಇಂದು ಕೇಂದ್ರ ಹಾಗೂ ರಾಜ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿರುವ ಬಿಜೆಪಿ ನಾಯಕರು, ಹಿಂದೆ ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷದ ಸಂಘಟನೆಗೆ ಶ್ರಮಿಸಿದ್ದಾರೆ. ಅವರ ತೋರಿದ ಮಾರ್ಗದಲ್ಲಿ ಕಾರ್ಯಕರ್ತರು ನಡೆಯಬೇಕು. ಬೂತ್‌ ಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯನ್ನು ಜನರ ಗಮನಕ್ಕೆ ತರಬೇಕು ಎಂದು ಹೇಳಿದರು.

  ಮುಖಂಡರಾದ ಕೃಷ್ಣಮೂರ್ತಿ, ಎಸ್‌.ವಿ.ಮುನಿವೆಂಕಟಪ್ಪ, ರಾಜೀವ್‌, ಎಂ.ಲಕ್ಷ್ಮಣಗೌಡ, ಅಶೋಕರೆಡ್ಡಿ, ವೆಂಕಟೇಗೌಡ, ಇ.ಶಿವಣ್ಣ, ವಿಐಪಿ ನಾಗರಾಜ್‌, ಜಯರಾಮರೆಡ್ಡಿ, ಶಿವಶಂಕರರೆಡ್ಡಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು