1:29 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಯಲ್ಲಿ ಒಳಬೇಗುದಿ: ಸಿಎಂ ವಿರುದ್ಧ ಮತ್ತೆ ಅಸಮಾಧಾನ, ರಾಜ್ಯಾಧ್ಯಕ್ಷರಿಗೆ ದೂರು

August 18, 2020, 7:29 AM

ಅಶೋಕ್ ಕಲ್ಲಡ್ಕ ಮಂಗಳೂರು

info.reporterkarnataka@gmail.com

ರಾಜ್ಯ ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ರಾಜ್ಯಸಭೆ ಚುನಾವಣೆ ವೇಳೆ ಕಾಣಿಸಿಕೊಂಡಿದ್ದ ಒಳಬೇಗುದಿ ಇದೀಗ ಮತ್ತೆ ಕಾಣಿಸಿಕೊಂಡಿದೆ. ಈ ಬಾರಿ ಅನುದಾನ ಹಂಚಿಕೆ ವಿಷಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷರಿಗೆ ದೂರು ನೀಡಲಾಗಿದೆ.

ರಿಪೋರ್ಟರ್ ಕರ್ನಾಟಕಕ್ಕೆ ದೊರೆತ ಮಾಹಿತಿ ಪ್ರಕಾರ ಅತೃಪ್ತ ಶಾಸಕರು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ತಮ್ಮ ಅಸಮಾಧಾನ ಬಹಿರಂಗಪಡಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಪಕ್ಷದ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಕ್ಷದ ಶಾಸಕರ ತಂಡ ನಳಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಶಾಸಕರು ಕೂಡ ಇದ್ದರು ಎಂದು ತಿಳಿದು ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಅತೃಪ್ತ ಶಾಸಕರು ದೂರಿದ್ದಾರೆ. ಮುಖ್ಯಮಂತ್ರಿಯವರು ಶಿವಮೊಗ್ಗ ಸೇರಿದಂತೆ ಕೆಲವು ಆಯ್ದ ಕ್ಷೇತ್ರಗಳಿಗೆ ಮಾತ್ರ ಅನುದಾನ ನೀಡುತ್ತಿದ್ದಾರೆ ಎಂದು ತಮ್ಮ ಅಳಲನ್ನು ಪಕ್ಷದ ಅಧ್ಯಕ್ಷರ ಮುಂದಿಟ್ಟಿದ್ದಾರೆ. ಸುಮಾರು ಒಂದು ತಾಸಿಗೂ ಅಧಿಕ ಕಾಲ ಈ ಮಾತುಕತೆ ನಡೆದಿದೆ ಎನ್ನಲಾಗಿದೆ.

ರಾಜ್ಯಸಭೆ ಚುನಾವಣೆ ವೇಳೆಯಲ್ಲೂ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡಿತ್ತು. ನಂತರ ಹಿರಿಯ ನಾಯಕರ ಮಧ್ಯ ಪ್ರವೇಶದಿಂದ ಅದು ತಣ್ಣಗಾಗಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು