ಇತ್ತೀಚಿನ ಸುದ್ದಿ
ಬಿಎಂಟಿಸಿ ಪ್ರತಿಭಟನಾಕಾರರ ಬಂಧನ: ಮುಖ್ಯಮಂತ್ರಿ, ಗೃಹ ಸಚಿವರ ಜತೆ ಮಾತುಕತೆ
December 12, 2020, 2:13 PM

ಬೆಂಗಳೂರು(reporterkarnataka news): ಮುಷ್ಕರದಲ್ಲಿ ನಿರತರಾಗಿರುವ 10ಕ್ಕೂ ಹೆಚ್ಚು ಬಿಎಂಟಿಸಿ ಪ್ರತಿಭಟನಾಕಾರರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಸರ್ಕಾರದ ಸೂಚನೆ ನಿರ್ಲಕ್ಷಿಸಿ ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಇದೇ ವೇಳೆ ರಾಜ್ಯದಲ್ಲಿ ಸಾರಿಗೆ ನೌಕರರ ಮಷ್ಕರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ , ಗೃಹ ಸಚಿವ ಬಸವ ರಾಜ್ ಬೊಮ್ಮಾಯಿ ಜತೆ ಮಾತುಕತೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ, ಸಮಸ್ಯೆ ಬಗೆಹರಿಸಲು ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.