12:42 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಬೃಹತ್ ಗಾಂಜಾ ಜಾಲ ಪತ್ತೆ: ಒಡಿಶಾದಿಂದ ಬಂದ 13.5 ಕ್ವಿಂಟಾಲ್ ಗಾಂಜಾ ಕಲಬುರ್ಗಿಯಲ್ಲಿ ವಶ

September 10, 2020, 11:14 AM

ಬೆಂಗಳೂರು(reporterkarnataka news): ಬೃಹತ್ ಗಾಂಜಾ ಪೂರೈಕೆ ಜಾಲವನ್ನು ಪೊಲೀಸರು  ಬೇಧಿಸಿದ್ದಾರೆ. ಒಡಿಶಾದಿಂದ ಕರ್ನಾಟಕಕ್ಕೆ ಲಾರಿಯಲ್ಲಿ ಸಾಗಿಸುತ್ತಿದ್ದ 13. 5 ಕ್ವಿಂಟಾಲ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ. 

ಕಲಬುರ್ಗಿ ಜಿಲ್ಲೆಯ ಕಮಲಾಪುರದಲ್ಲಿ ಬೆಂಗಳೂರು ಪೊಲೀಸರ  ವಿಶೇಷ ತಂಡ ಈ ಕಾರ್ಯಾಚರಣೆ ನಡೆಸಿದೆ.

 ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಮಾಹಿತಿ ಬಹಿರಂಗಪಡಿಸಿದ್ದಾರೆ.. ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಒಡಿಶಾದಿಂದ ತರಲಾಗುತ್ತಿದ್ದ ಈ ಗಾಂಜಾವನ್ನು ರಾಜ್ಯದ ಎಲ್ಲ ಪ್ರದೇಶಗಳಿಗೆ ಪೂರೈಸಲು  ಆರೋಪಿಗಳು ಮಾಸ್ಟರ್ ಪ್ಲಾನ್ ಸಿದ್ದಪಡಿಸಿದ್ದರು.

ಮಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ಪೂರೈಕೆ ಮಾಡಲು ಈ ಗಾಂಜಾ ತರಲಾಗುತ್ತಿತ್ತು ಎಂದು ಶಂಕಿಸಲಾಗಿದೆ. ಕಳೆದ ವಾರ ಮೈಸೂರಿನಿಂದ ಕೇರಳದ ತಿರುವನಂತಪುರಕ್ಕೆ ತೆರಳಿದ್ದ ಲಾರಿಯೊಂದರಲ್ಲಿ ಸುಮಾರು 500 ಕಿಲೋ ಗಾಂಜಾವನ್ನು ಅಲ್ಲಿನ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು