4:09 AM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಕುಖ್ಯಾತ ಆರೋಪಿ ವಿಕ್ಕಿ ಬಪ್ಪಾಲ್ ಹಾಗೂ ಆತನ ಪತ್ನಿ ಸೆರೆ; ಗಾಂಜಾ ವಶ

16/07/2022, 20:55

ಮಂಗಳೂರು(reporterkarnataka.com): ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾ ಹೊಂದಿದ ಆರೋಪದ ಮೇಲೆ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್‌ಐ ರಾಜೇಂದ್ರ ಬಿ.  ಅವರ ನೇತೃತ್ವದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಗರದ ಕಾವೂರು ಶಂಕರ ನಗರ ಕೆ. ಸಿ. ಆಳ್ವ ಲೇಔಟ್ ನ ಮನೆಯೊಂದಕ್ಕೆ ದಾಳಿ ನಡೆಸಿ
ಗಾಂಜಾವನ್ನು ಹೊಂದಿದ್ದ ಆರೋಪಿ ವಿಕ್ಕಿ ಬಪ್ಪಾಲ್(28) ಹಾಗೂ ಆತನ ಪತ್ನಿ ಅಂಜನಾ(21) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 22 ಸಾವಿರ ರೂ.

ಮೌಲ್ಯದ ಗಾಂಜಾ, 1,500 ರೂ. ನಗದು, ಮೊಬೈಲ್ ಫೋನ್-1 ಮತ್ತು ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ.

ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳನ್ನು ಮಾದಕ ವಸ್ತುಗಳ ಸೇವನೆ ಬಗ್ಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿರುತ್ತದೆ. ಆರೋಪಿಗಳ ಪೈಕಿ ವಿಕ್ಕಿ ಬಪ್ಪಾಲ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ದಕ್ಷಿಣ, ಉತ್ತರ, ಬರ್ಕೆ, ಉರ್ವಾ, ಗ್ರಾಮಾಂತರ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ, ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಹಾಗೂ ಕಿಡ್ನಾಫ್ ಗೆ ಸಂಬಂಧಪಟ್ಟಂತೆ ಒಟ್ಟು 13 ಪ್ರಕರಣಗಳು ದಾಖಲಾಗಿರುತ್ತದೆ. ಅಂಜನಾ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಹಾಗೂ ಆತನ ಪತ್ನಿ ಜೊತೆ ಸೇರಿಕೊಂಡು ಮಂಗಳೂರು ನಗರದ ಎಂಜಿ ರಸ್ತೆಯಲ್ಲಿರುವ

ವಿದ್ಯಾಸಂಸ್ಥೆಗಳ ಪರಿಸರದಲ್ಲಿ, ಕೆಪಿಟಿ, ಕದ್ರಿ, ಜೆಪ್ಪು ಬಪ್ಪಾಲ್ ಪರಿಸರದಲ್ಲಿ ಗಾಂಜಾವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಸೆನ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು