ಇತ್ತೀಚಿನ ಸುದ್ದಿ
ಸಿಸಿಬಿ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸುತ್ತಿಲ್ಲವಂತೆ ನಟಿ ಸಂಜನಾ !
September 8, 2020, 5:11 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ಆರೋಪದ ಹಿನ್ನೆಲೆಯಲ್ಲಿ ಇದೀಗ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಸಂಜನಾ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡುತ್ತಿಲ್ಲ ಎಂದು ವರದಿಯಾಗಿದೆ.
ಸಂಜನಾ ಅವರನ್ನು ಮನೆಯಲ್ಲಿಯೇ ವಿಚಾರಣೆಗೆ ಗುರಿಪಡಿಸಲಾಗಿದೆ. ಈಗಾಗಲೇ ಸಿಸಿಬಿ ಬಂಧನದಲ್ಲಿರುವ ಆರೋಪಿಗಳ ಜತೆಗಿನ ಸಂಪರ್ಕ ಕುರಿತಂತೆ ಪ್ರಮುಖವಾಗಿ ಅವರನ್ನು ಪ್ರಶ್ನಿಸಲಾಗಿದೆ. ಸಂಜನಾ ಶ್ರೀಲಂಕಾದಲ್ಲಿನ ಕ್ಯಾಸಿನೋದಲ್ಲಿ ಕಾಣಿಸಿಕೊಂಡಿರುವ ದೃಶ್ಯಗಳು ಇದೀಗ ವೈರಲ್ ಆಗಿವೆ.