6:02 AM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು!

28/06/2022, 22:20

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘಟ್ಟದಲ್ಲಿ ಇದರಿಂದ ನಗರದ ಜನತೆಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ.


ಯುಜಿಡಿ ದುರ್ಗಂಧಭರಿತ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರು, ಮಕ್ಕಳು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನಗಳು, ಬಸ್ಸು, ಕಾರು ಸಂಚರಿಸುವಾಗ ಅಲ್ಲಿನ ಗಬ್ಬು ನಾತ ಬೀರುತ್ತಿರುವ ನೀರು ಹಾರಿ ಜನರಿಗೆ ಕಿರಿ ಕಿರಿ ಉಂಟಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿಯೇ ಇಂತಹ ದುಸ್ಥಿತಿ ಯಾದರೆ ಇನ್ನೂ ಸ್ಲುಂಗಳ ಪರಿಸ್ಥಿತಿ ಹೇಗೆ?ಎಂಬುದು ಕೌತುಕವಾಗಿದೆ.


ನಗರಸಭೆಯ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕ ಸ್ಥಳದಲ್ಲಿ ಆಗುವ ತೊಂದರೆಯನ್ನು ಪರಿಶೀಲಿಸಿ  ಕ್ರಮ ವಹಿಸಬೇಕಾಗಿ ನಾಗರಿಕರು ಮನವಿ ಮಾಡಿದ್ದಾರೆ.

ಈಗಾಗಲೇ  ಎರಡು ವರ್ಷಗಳಿಂದ ಕೋವಿಡ್ 19 ಕಾಯಿಲೆಯನ್ನು ಎದುರಿಸಿ ,ಸಾವು ನೋವುಗಳನ್ನು ಅನುಭವಿಸಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರೆ, ಇದರ ಬೆನ್ನಲ್ಲೇ ಹೊಸ ಕಾಯಿಲೆಗಳಿಗೆ ಎಡೆಮಾಡಿಕೊಡುತ್ತಿರುವ ಈ ಹೊಲಸು ನೀರು ರಸ್ತೆಯ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿರುವುದು ವಿಪರ್ಯಾಸ.


ಅತೀ ಶೀಘ್ರದಲ್ಲೇ ಹೊಸಕಾಯಿಲೆ ಉದ್ಭವವಾಗುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣುತ್ತಿವೆ ಎಂದು ಸಮಾಜ ಸೇವೆ ಸಲ್ಲಿಸುತ್ತಿರುವ ಆಶಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆಶಾ ಮಂಚನಬಲೆ ಅವರು, ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು