ಇತ್ತೀಚಿನ ಸುದ್ದಿ
ಚೀನಾದಲ್ಲಿ ಹೋಟೆಲ್ ಕಟ್ಟಡ ಕುಸಿತ : ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆ
August 30, 2020, 9:30 AM

ಬೀಜಿಂಗ್(reporter Karnataka): ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿ ಸಂಭವಿಸಿದ ಹೋಟೆಲ್ ಕಟ್ಟಡ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 29ಕ್ಕೆ ಏರಿದೆ. ಕಟ್ಟಡ ದುರಂತದಲ್ಲಿ 27 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಏಳು ಮಂದಿಯ ಸ್ಥಿತಿ ಅತ್ಯಂತ ಗಂಭೀರವಾಗಿದೆ.
ಶಾಂಕ್ಸಿ ಪ್ರಾಂತ್ಯದ ಕ್ಸಿಯಾಂಗ್ ಪೀನ್ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಎರಡು ಮಹಡಿ ಅತಂಸ್ತಿನ ಹೋಟೆಲ್ ನಲ್ಲಿ ಹುಟ್ಟು ಹಬ್ಬ ಆಚರಿಸುತ್ತಿದ್ದಾಗ ದುರಂತ ಸಂಭವಿಸಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ 57 ಮಂದಿಯನ್ನು ರಕ್ಷಿಸಲಾಗಿದೆ.
ದುರಂತ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ.