ಇತ್ತೀಚಿನ ಸುದ್ದಿ
ಗ್ರಾಪಂ ಚುನಾವಣೆ ಸಮೀಪಿಸುತ್ತಿದ್ದಂತೆ ಕೈ ತೊರೆದು ಕಮಲ ಪಾಳಯಕ್ಕೆ ವಲಸೆ!
December 18, 2020, 10:24 PM

ಮಂಗಳೂರು(reporterkarnataka news);
ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಪಾಳಯದಲ್ಲಿ ಸಾಮೂಹಿಕ ವಲಸೆ ಆರಂಭಗೊಂಡಿದೆ.
ಜಿಲ್ಲಾ ಕಾಂಗ್ರೆಸ್ನ ಹಿಂದುಳಿದ ವರ್ಗಗಳ ಅಧ್ಯಕ್ಷರು ನೂರಾರು ಕಾರ್ಯಕರ್ತರ ಜತೆ ಶುಕ್ರವಾರ ಮಾತೃಪಕ್ಷವನ್ನು ತೊರೆದು ಅಧಿಕಾರೂಢ ಬಿಜೆಪಿ ಸೇರಿದ್ದಾರೆ. ಜಿಲ್ಲಾ ಕಾಂಗ್ರೆಸ್ ನಿಂದ ಇನ್ನಷ್ಟು ನಾಯಕರು ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಯೂ ಇದೆ.
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಮಾಧವ ಮಾವೆ, ಮಾಣಿ ಜಿಪಂ ಸದಸ್ಯೆ ಮಂಜುಳಾ ಮಾವೆ, ಕನ್ಯಾನ ತಾಪಂ ಸದಸ್ಯ ಕುಮಾರ್ ಭಟ್ ಅವರು ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಚುನಾವಣೆ ಕೇವಲ ನಾಲ್ಕು ದಿನಗಳಿರುವಾಗಲೇ ನಾಯಕರ ಸಾಮೂಹಿಕ ಪಕ್ಷಾಂತರ ಪಕ್ಷಕ್ಕೆ ಹಿನ್ನಡೆ ಉಂಟು ಮಾಡಲಿದೆ.