ಇತ್ತೀಚಿನ ಸುದ್ದಿ
ಮಾರಕ ಕೊರೊನಾಕ್ಕೆ ದೇಶದಲ್ಲಿ ಒಂದೇ ದಿನ 1016 ಬಲಿ: 32,50,429 ಮಂದಿ ಗುಣಮುಖ
September 7, 2020, 5:40 AM

ನವದೆಹಲಿ(reporterkarnataka news): ದೇಶದಲ್ಲಿ ಮಾರಕ ಕೊರೊನಾದ ಮಹಾ ಸ್ಫೋಟ ಸಂಭವಿಸಿದೆ. ಕೊರೊನಾ ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 1016 ಮಂದಿಯ ಬಲಿಪಡೆದುಕೊಂಡಿದೆ. ಕೊರೊನಾದಿಂದ ದೇಶದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ ಇದೀಗ 71, 642ಕ್ಕೆ ತಲುಪಿದೆ.
ದೇಶದಲ್ಲಿ ಒಂದೇ ದಿನದಲ್ಲಿ ದಾಖಲೆ ಮಂದಿಗೆ ಕೊರೊನಾ ಸೋಂಕು ತಗುಲಿದೆ. 24 ಗಂಟೆ ಅವಧಿಯಲ್ಲಿ 90,802 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸತತ ಎರಡನೆ ದಿನ ಕೊರೊನಾ ಸೋಂಕಿತರ ಸಂಖ್ಯೆ ತೊಂಬತ್ತು ಸಾವಿರ ದಾಟಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42, 04, 614ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 8, 82,542 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.
ಕೊರೊನಾ ಸೋಂಕಿಗೆ ತುತ್ತಾಗಿದ್ದ 32, 50, 429 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.