ಇತ್ತೀಚಿನ ಸುದ್ದಿ
ಸಿಎಂ ಗೃಹ ಕಚೇರಿ ‘ಕೃಷ್ಣಾ’ದ 6 ಮಂದಿ ಸಿಬ್ಬಂದಿಗೆ ಕೊರೊನಾ ಸೋಂಕು:ಗೃಹ ಸಚಿವರು ಸ್ವಯಂ ಕ್ವಾರಂಟೈನ್
August 3, 2020, 7:06 AM

ಬೆಂಗಳೂರು(reporterkarnataka news):
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಆರು ಸಿಬ್ಬಂದಿಯಲ್ಲಿ ಕೊರೋನಾ ಸೋಂಕಿನ ಲಕ್ಷಣ ದೃಢಪಟ್ಟಿದೆ ಎಂದು ವರದಿಯಾಗಿದೆ.
ಕಾವೇರಿ ನಿವಾಸದಲ್ಲಿನ ಮೂರು ಸಿಬ್ಬಂದಿಯಲ್ಲಿ ಕೊರೊನಾ ಲಕ್ಷಣ ಕಂಡು ಬಂದಿದೆ. ಒಟ್ಟು ಒಂಬತ್ತು ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.
ಈ ಮಧ್ಯೆ ಸಿಎಂ ಶೀಘ್ರ ಚೇತರಿಕೆಗೆ ಹಾರೈಸಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೊಂದೆಡೆ ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಪ್ರಾಥಮಿಕ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಲು ನಿರ್ಧರಿಸಿದ್ದಾರೆ.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಕ್ವಾರಂಟೈನ್ ಗೆ ಒಳಗಾಗಲು ತೀರ್ಮಾನಿಸಿದ್ದಾರೆ.