6:55 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಕೆನರಾ ಕಾಲೇಜು ಎನ್ ಎಸ್.ಎಸ್. ವತಿಯಿಂದ ರಕ್ತದಾನ ಶಿಬಿರ.

January 11, 2021, 1:07 PM

ಅನುಷ್ ಪಂಡಿತ್
ಮಂಗಳೂರು:reporterkarnataka news):ರಾಷ್ಟ್ರೀಯ ಯುವ ದಿನೋತ್ಸವದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ, ಕೆನರಾ ಕಾಲೇಜು ಮಂಗಳೂರು ಇದರ ವತಿಯಿಂದ ಲಯನ್ಸ್ ಕ್ಲಬ್ ಕಂಕನಾಡಿ, ಪಡೀಲ್ ಮಂಗಳೂರು ಹಾಗೂ ವೆನ್ ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದಿಂದ ರಕ್ತದಾನ ಶಿಬಿರವು ಜರಗಿತು.


ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ. ಇವರು ಈ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ ವಿವೇಕಾನಂದ ಜಯಂತಿಯನ್ನು ಆಚರಿಸುವ ಸಂದರ್ಭದಲ್ಲಿ ಇಂತಹ ಒಂದು ಅರ್ಥ ಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳನ್ನು ಅಭಿನಂದಿಸಿದರು.ಮುಖ್ಯ ಅತಿಥಿಗಳಾಗಿದ್ದ ಡಾ. ಶರತ್ ಕುಮಾರ್ ರಾವ್ ಜೆ. ಬ್ಲಡ್ ಬ್ಯಾಂಕ್ ಆಫೀಸರ್, ವೆನ್ ಲಾಕ್ ಆಸ್ಪತ್ರೆ ಮಂಗಳೂರು ಇವರು ರಕ್ತದಾನದ ಮಹತ್ವ ಮತ್ತು ಪ್ರಯೋಜನವನ್ನು ಎಲ್ಲಾ ಸ್ವಯಂಸೇವಕ ಸೇವಕಿಯರಿಗೆ ಮನದಟ್ಟು ಮಾಡಿಕೊಟ್ಟರು. ಲಯನ್ಸ್ ಕ್ಲಬ್ ಕಂಕನಾಡಿ ಪಡೀಲ್ ಮಂಗಳೂರು ಇದರ ಅಧ್ಯಕ್ಷೆ ಲಯನ್ ಅರುಂಧತಿ ಶೆಟ್ಟಿಯವರು ಇಂತಹ ಅದ್ಭುತ ಕಾರ್ಯಕ್ರಮವನ್ನು ನಡೆಸಿದ್ದಕ್ಕಾಗಿ ಕೆನರಾ ಕಾಲೇಜನ್ನು ಪ್ರಶಂಸಿದರು.ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸ್ವಯಂಸೇವಕರಿಗೆ ಶುಭವನ್ನು ಹಾರೈಸಿದರು.


ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾಗಿರುವ ಹಾರ್ಧಿಕ್ ಪಿ. ಚೌಹಾಣ್, ಲಯನ್ಸ್ ಕ್ಲಬ್ ನ ಪದಾಧಿಕಾರಿಗಳಾದ ನಾಗೇಶ್ ಕುಮಾರ್, ರವೀಂದ್ರನಾಥ ಶೆಟ್ಟಿ, ಎಡ್ವಿನ್ ವಾಲ್ಟರ್, ದೀಪಾಲಿ ಕಂಬದಕೋಣೆ, ಮಾಧವ ಉಳ್ಳಾಲ್, ರೇಖಾ ಉಳ್ಳಾಲ್ ಉಪಸ್ಥಿತರಿದ್ದರು.

ಕಾಲೇಜಿನ ರಾಷ್ಟ್ರೀಯ ಸೇವಾಯೋಜನಾಧಿಕಾರಿ ಸೀಮಾ ಪ್ರಭು ಎಸ್. ಪ್ರಾಸ್ತಾವಿಸಿ ಸ್ವಾಗತಿಸಿದರು. ಇನ್ನೋರ್ವ ರಾಷ್ಟ್ರೀಯ ಸೇವಾಯೋಜನಾಧಿಕಾರಿ ಕಾವ್ಯಶ್ರೀ ಕೆ. ವಂದಿಸಿದರು. ಸ್ವಯಂಸೇವಕಿ ಸೌಮ್ಯಾ ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು