ಇತ್ತೀಚಿನ ಸುದ್ದಿ
ಕಾಂಗ್ರೆಸ್ ಶಾಸಕನ ಪುತ್ರನಿಂದ ಪೊಲೀಸರ ಮೇಲೆ ಹಲ್ಲೆ: ಬಂಧನ
December 7, 2020, 9:26 AM

ಬೆಂಗಳೂರು(reporterkarnataka news): ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಪುತ್ರ ಫಯಾಜ್ ಮೂವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ ಫಯಾಜ್ ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಹೆಬ್ಬಾಳ ಸಮೀಪದ ಬಿಎಂಟಿಸಿ ಡಿಪೋ ಬಳಿ ಈ ಘಟನೆ ನಡೆದಿದೆ.
ವೇಗವಾಗಿ ಬಂದ ಕಾರನ್ನು ನಿಲ್ಲಿಸಲು ಪೊಲೀಸರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಫಯಾಜ್ ಮತ್ತು ಗೆಳೆಯರು ಮೂವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.