ಇತ್ತೀಚಿನ ಸುದ್ದಿ
ಕೊರೊನಾ 2ನೇ ಅಲೆ: ಡಿಸೆಂಬರ್ 20ರಿಂದ ರಾಜ್ಯಾದ್ಯಂತ ಸಭೆ- ಸಮಾರಂಭಗಳಿಗೆ ನಿರ್ಬಂಧ ?
December 4, 2020, 6:09 PM

ಬೆಂಗಳೂರು(reporter Karnataka): ಕೊರೊನಾ 2ನೇ ಅಲೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಡಿಸೆಂಬರ್ 20ರಿಂದ ಜನವರಿ 2ರ ವರೆಗೆ ರಾಜ್ಯಾದ್ಯಂತ ಎಲ್ಲ ರೀತಿಯ ಸಭೆ- ಸಮಾರಂಭಗಳಿಗೆ ನಿರ್ಬಂಧ ಹೇರುವಂತೆ ಕೋವಿಡ್ ನಿಯಂತ್ರಣ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ.
ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಶುಕ್ರವಾರ ವಿಧಾನಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು.
ಕೋವಿಡ್ ನಿಯಂತ್ರಣ ಸಲಹಾ ಸಮಿತಿ ಶಿಫಾರಸು ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ
ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
ಗ್ರಾಮ ಪಂಚಾಯಿತಿ ಚುನಾವಣೆ ನಡೆಸದಂತೆ ಮನವಿ ಮಾಡಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೆ. ಆದರೆ ಆಯೋಗ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಪಂಚಾಯಿತಿ ಚುನಾವಣೆಗೆ ಮನೆ ಮನೆಗೆ ವೈರಸ್ ಹಂಚಲು ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಜನರು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಸಚಿವರು ಹೇಳಿದರು.