6:18 AM Sunday25 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು