7:35 AM Monday30 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಕೊರೊನಾ ಹೆಸರಲ್ಲಿ ಬಿಜೆಪಿ ಸರಕಾರ ದಂಧೆ : ಕಾಂಗ್ರೆಸ್ ಆರೋಪ

September 7, 2020, 3:00 PM

ಮಂಗಳೂರು (Reporter Karnataka News)

ಕೇಂದ್ರದಿಂದ ರಾಜ್ಯ ಸರಕಾರಕ್ಕೆ ಕೊರೊನಾ ನಿಯಂತ್ರಣಕ್ಕೆ ಯಾವುದೇ ನೆರವು ಇಲ್ಲ. ರಾಜ್ಯ ಸರಕಾರ ಕೂಡ ವೈದ್ಯಕೀಯ ಖರೀದಿಯಲ್ಲಿ ಭ್ರಷ್ಟಾಚಾರವನ್ನು ಮಾಡುತ್ತಿದೆ. ಕೊರೊನಾ ಹೆಸರಿಂದ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರ ದಂಧೆ ಮಾಡುತ್ತಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ.

ಅವರು ಸೋಮವಾರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಬಳಿ ಕಾಂಗ್ರೆಸ್ ಪ್ರತಿಭಟನೆ ಸಭೆಯಲ್ಲಿ ಮಾತನಾಡಿ, ಕೊರೊನಾ ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವೈಜ್ಞಾನಿಕವಾಗಿ ತಟ್ಟೆ ತಟ್ಟಿ, ಕ್ಯಾಂಡಲ್ ಉರಿಸಲು ಹೇಳಿ ಸಂತೈಸಲು ನೋಡಿದ್ದಾರೆ. ಒಂದೇ ಒಂದು ವೈಜ್ಞಾನಿಕ ಹೆಜ್ಜೆಯನ್ನು ಇಟ್ಟಿಲ್ಲ. ಪಿಪಿಇ ಕಿಟ್, ಮಾಸ್ಕ್, ವೆಂಟಿಲೇಟರ್ ಖರೀದಿಯಲ್ಲೂ ವಂಚನೆ ನಡೆಯುತ್ತಿದೆ. ಕೊರೊನಾ ಹೆಸರಿನಲ್ಲಿ ಈ ರೀತಿ ದಂಧೆ ಮಾಡುವುದು ಸರಿಯಲ್ಲ ಎಂದರು.
ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಕೊರೊನಾ ರೋಗಿಗಳು ಸತ್ತರು ಪರವಾಗಿಲ್ಲ ಸರಕಾರ ಹಣ ಮಾಡುವುದೇ ಮುಖ್ಯ ಎನ್ನುವ ಹಾಗಿದೆ. ಪಿಪಿಇ ಕಿಟ್ ಹಾಗೂ ವೆಂಟಿಲೇಟರ್ ಖರಿದಿಯಲ್ಲಿ ಭಾರಿ ಗೋಲ್‌ಮಾಲ್ ನಡೆಸಿ ನೈಜ್ಯ ಬೆಲೆಗಿಂತಲೂ ಹೆಚ್ಚು ಖರ್ಚಾದ ಲೆಕ್ಕಾಚಾರವನ್ನು ರಾಜ್ಯ ಸರಕಾರ ನೀಡುತ್ತಿದೆ. ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಇಲ್ಲದೇ ಇದ್ದರು ಅದರ ಪರಿವೇ ಇಲ್ಲ ಹಣ ಮಾಡುವುದೇ ಇವರ ಉದ್ದೇಶ ಆಗಿದೆ ಎಂದು ಆರೋಪ ಮಾಡಿದರು.
ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮೊಯಿದಿನ್ ಬಾವ, ತಾ.ಪಂ.ಅಧ್ಯಕ್ಷ ಮಹಮ್ಮದ್ ಮೋನು, ಕಾರ್ಪೋರೇಟರ್ ಎ.ಸಿ.ವಿನಯರಾಜ್, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಅಪ್ಪಿ, ಶಾಲೆಟ್ ಪಿಂಟೊ, ನವೀನ್ ಸ್ಟೀವನ್, ಅಶ್ವಿನ್ ಸ್ಟೀವನ್ ಮತ್ತಿತರರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ 401 ಮಂದಿ ಸತ್ತವರಲ್ಲಿ ಶೇಕಡ 60ಕ್ಕೂ ಹೆಚ್ಚು ಮಂದಿ ವೆಂಟಿಲೇಟರು ಮತ್ತು ಐಸಿಯು ಬೆಡ್ ಅಲ್ಲದೇ ಸತ್ತಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ಕೊಡಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆದ್ದರಿಂದ ಕೂಡಲೇ ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕು ಎಂಬ ಉಭಯ ಜಿಲ್ಲೆಗಳ ಉಸ್ತುವಾರಿ ಮಂತ್ರಿಗಳ ರಾಜೀನಾಮೆ ಪಡೆಯಬೇಕು. ಖಾಸಗಿ ಮತ್ತು ಸರ್ಕಾರಿ ಮೆಡಿಕಲ್ ಕಾಲೇಜುಗಳ ಆಸ್ಪತ್ರೆಗಳನ್ನು ಸಂಪೂರ್ಣವಾಗಿ ಸರಕಾರ ವಹಿಸಿಕೊಳ್ಳಬೇಕು, ವೆಂಟಿಲೇಟರ್ ಮತ್ತು ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಬೇಕು, ಉಚಿತವಾಗಿ ಚಿಕಿತ್ಸೆ ನೀಡಲು ಎಲ್ಲಾ ಕೋಪಡ್ ಪೀಡಿತರಿಗೆ ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್ ಮನವಿಯನ್ನು ನೀಡಿತು. ಇಲ್ಲದೇ ಇದ್ದರೆ, ರಾಜ್ಯಾದ್ಯಂತ ಉಗ್ರ ಹೋರಾಟ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು