2:40 PM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಕೊರೊನಾ ಹೊಸ ತಳಿ: ವಿದೇಶಿದಿಂದ ಬಂದ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ

December 23, 2020, 8:33 AM

ಮಂಗಳೂರು (reporterkarnataka news): ಇಂಗ್ಲೆಂಡ್ ರಾಷ್ಟ್ರದಲ್ಲಿ ಕೋವಿಡ್-19 ರೋಗದ ಹೊಸ ತಳಿಯ ವೈರಸ್ ಪತ್ತೆಯಾಗಿದ್ದು, ಇದರ ಹರಡುವಿಕೆಯನ್ನು  ತಡೆಯಲು ಇಂಗ್ಲೆಂಡ್‍ನಿಂದ ಭಾರತಕ್ಕೆ ಬರುವ ಎಲ್ಲಾ ಅಂತಾರಾಷ್ಟ್ರೀಯ ವಿಮಾನವನ್ನು ಈಗಾಗಲೇ ರದ್ದುಪಡಿಸಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬೆಂಗಳೂರು, ಮಹಾರಾಷ್ಟ್ರ, ಹೈದರಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ ಜಿಲ್ಲೆಗೆ ಡಿಸೆಂಬರ್ 7 ರಿಂದ ಆಗಮಿಸಿರುವ ಎಲ್ಲ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಾಗುವುದು. 

ಜಿಲ್ಲೆಗೆ ಆಗಮಿಸಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸ್ವಯಂ ಪ್ರೇರಿತವಾಗಿ ಬಂದು, ಕಡ್ಡಾಯವಾಗಿ ಆರ್.ಟಿ.-ಪಿ.ಸಿ.ಆರ್. ಪರೀಕ್ಷೆಗೆ ಒಳಪಡಿಸಬೇಕು. 

    ಸಾರ್ವಜನಿಕರು ತಮ್ಮ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿದೇಶದಿಂದ ಆಗಮಿಸಿರುವ ವ್ಯಕ್ತಿಗಳು ಇದ್ದಲ್ಲಿ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು.
      ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (9449843050), ನೋಡಲ್ ಅಧಿಕಾರಿ ಕೋವಿಡ್-19(9972343984), ಜಿಲ್ಲಾ ಸರ್ವೇಕ್ಷಣಾಧಿಕಾರಿ (9448887706), ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಾದ ಮಂಗಳೂರು (9448151928), ಬಂಟ್ವಾಳ (9845838677), ಬೆಳ್ತಂಗಡಿ (9845967576), ಪುತ್ತೂರು (9448445853), ಸುಳ್ಯ(9449662224) ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು