8:06 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಕೊರೊನಾ ಕರಾಮತ್ತು; ಸರಕಾರಿ ಶಾಲೆಗಳಿಗೆ  ಜೈ; ಖಾಸಗಿ ಶಾಲೆಗಳಿಗೆ ಬೈ ಬೈ!!

September 3, 2020, 2:18 AM

ಮಂಗಳೂರು(reporterkarnataka news):

ಸರಕಾರಿ ಶಾಲೆಗಳಿಗೆ ಇದ್ದಕ್ಕಿದ್ದ ಹಾಗೆ ಬೇಡಿಕೆ ಹೆಚ್ಚಿದೆ. ಕೊರೊನಾ ಕರಾಮತ್ತಿನಿಂದ ಸರಕಾರಿ ಸ್ಕೂಲ್ ಗಳಿಗೆ ಶುಕ್ರದೆಸೆ ಬಂದಿದೆ. ನೌಕರಿ ಕಳೆದುಕೊಂಡಿರುವುದು, ಸಂಬಳದಲ್ಲಿ ಕಡಿತ, ಆನ್ ಲೈನ್ ತರಗತಿ ಇವೆಲ್ಲ ಹೆತ್ತವರು ಸರಕಾರಿ ಶಾಲೆಗಳತ್ತ ಮುಖ ಮಾಡುವಂತೆ ಮಾಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೆ, ರಾಜ್ಯದ ಬಹುತೇಕ ಜಿಲ್ಲೆಗಳ ಶಿಕ್ಷಣ ವಲಯದಲ್ಲಿ ಈ ರೀತಿಯ ಮಹತ್ವದ ಬದಲಾವಣೆಯಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯ 914 ಸರಕಾರಿ ಶಾಲೆಗಳ ಪೈಕಿ 350 ಶಾಲೆಗಳಲ್ಲಿ ದಾಖಲಾತಿ ಹೆಚ್ಚಳವಾಗಿದೆ. ಖಾಸಗಿ ಶಾಲೆಗಳಿಂದ ತಮ್ಮ ಮಕ್ಕಳನ್ನು ಬಿಡಿಸಿ ಸರಕಾರಿ ಶಾಲೆಗಳಿಗೆ ಪೋಷಕರು ಮೊರೆ ಹೋಗುತ್ತಿದ್ದಾರೆ. ರಾಜ್ಯದ ಬಹುತೇಕ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಹಾಗೆ ಖಾಸಗಿ ಶಾಲೆಗಳಲ್ಲಿ ಟಿಸಿಗೆ ಅರ್ಜಿ ಹಾಕುವವರ ಸಂಖ್ಯೆ ಹೆಚ್ಚಳವಾಗುತ್ತಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಮಾತ್ರವಲ್ಲದೆ ಉತ್ತರ ಕರ್ನಾಟಕದ ಹಾವೇರಿ, ಗಂಗಾವತಿ, ವಿಜಯಪುರ, ರಾಯಚೂರು ಜಿಲ್ಲೆಯಲ್ಲೂ ಸರಕಾರಿ ಶಾಲೆಗಳಿಗೆ ಡಿಮ್ಯಾಂಡ್ ಶುರುವಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಸಾವಿರಾರು ಮಕ್ಕಳು ಖಾಸಗಿ ಶಾಲೆ ತೊರೆದಿದ್ದು, ಸರಕಾರಿ ಶಾಲೆಗೆ ಸೇರಿಕೊಂಡಿದ್ದಾರೆ. ಕಿರಿಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 1ರಿಂದ 7ನೇ ಕ್ಲಾಸ್ ತರಗತಿಗಳಿಗೆ ದಾಖಲಾತಿ ಹೆಚ್ಚಳವಾಗಿದೆ. 

ಸರಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಸಿಗುತ್ತದೆ. ಮಧ್ಯಾಹ್ನದ ಬಿಸಿಯೂಟವೂ ದೊರೆಯುತ್ತದೆ.

ನಮ್ಮ ಕೈಯಲ್ಲಿ ಖಾಸಗಿ ಶಾಲೆಗೆ ಶುಲ್ಕ ಕಟ್ಟಲು ಹಣ ಇಲ್ಲ. ಹಾಗೆ ಕೊರೊನಾ ಸೋಂಕಿನಿಂದ ಮಕ್ಕಳನ್ನು ಶಾಲಾ ವಾಹನಗಳಲ್ಲಿ ಕಳುಹಿಸಲು ಕೂಡ ಭಯವಾಗುತ್ತದೆ ಎನ್ನುವುದು ಹೆಚ್ಚಿನ ಹೆತ್ತವರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು