7:38 AM Wednesday25 - November 2020
ಬ್ರೇಕಿಂಗ್ ನ್ಯೂಸ್
ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ

ಇತ್ತೀಚಿನ ಸುದ್ದಿ

ಕೊರೊನಾ ಪರಿಹಾರ ನಿಧಿಯನ್ನು ನೇರ ಅರ್ಚಕರ ಖಾತೆಗೆ ಜಮೆ ಮಾಡಲು ಮನವಿ

September 1, 2020, 11:45 AM

ಬಂಟ್ವಾಳ(reporterkarnataka news):

ದೇವಾಲಯಗಳ ಅರ್ಚಕರಿಗೆ ಕೇಂದ್ರ ಸರಕಾರ ಬಿಡುಗಡೆಗೊಳಿಸಿದ ಪರಿಹಾರ ಧನವನ್ನು ನೇರವಾಗಿ ಅರ್ಚಕರ ಖಾತೆಗೆ ಜಮೆ ಮಾಡುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮನವಿ ಸಲ್ಲಿಸಲಾಗಿದೆ.

ದೇವಾಲಯಗಳ ಅರ್ಚಕರು ಗಳಿಗೆ ಕೊರೊನಾ ಸಂಕಷ್ಟದಿಂದ ಪರಿಹಾರ ರೂಪದಲ್ಲಿ ಆರ್ಥಿಕ ಸಹಾಯವನ್ನು ತಸ್ತಿಕ್ ಭತ್ತೆ ರೂಪದಲ್ಲಿ 33.65

ಕೋಟಿ ರೂಪಾಯಿ ಸರಕಾರ ಬಿಡುಗಡೆ ಮಾಡಿದ್ದು ದೇವಾಲಯಗಳ ಖಾತೆಯಿಂದ ಅರ್ಚಕರ ಖಾತೆಗೆ ವರ್ಗಾಯಿಸುವಂತೆ ಸೂಚಿಸಲಾಗಿದೆ. ಆದರೆ ಪ್ರಸ್ತುತ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಬರ್ಖಾಸ್ತುಗೊಂಡಿರುವುದರಿಂದ ದೇವಾಲಯದ ಉಳಿತಾಯ ಖಾತೆ ವರ್ಗಾವಣೆ ಗೊಳ್ಳದೆ ತಟಸ್ಥವಾಗಿದ್ದು ಸರಕಾರದ ಸೂಚನೆಯಂತೆ ಸಹಾಯಧನ ವರ್ಗಾವಣೆ ಗೊಳ್ಳಲು ಇನ್ನು ಮೂರು ತಿಂಗಳು ಕಾಯಬೇಕಾಗುತ್ತದೆ.

ಇದರಿಂದಾಗಿ ಅರ್ಚಕರು ಹಾಗೂ ವ್ಯವಸ್ಥಾಪನ ಸಮಿತಿಯ ಮಧ್ಯೆ ಗೊಂದಲ ಹಾಗೂ ಭಿನ್ನಮತ ಜಗಳಗಳಿಗೆ ಕಾರಣವಾಗಲಿದೆ. ಸರಕಾರ ಈ ನಿಟ್ಟಿನಲ್ಲಿ ಕೊರೊನಾ ಪರಿಹಾರದ ಸಹಾಯಧನವನ್ನು ನೇರ ವಾಗಿ ಅರ್ಚಕರ ಖಾತೆಗಳಿಗೆ ಜಮೆ ಮಾಡುವಂತೆ  ಬಂಟ್ವಾಳ ತಹಸೀಲ್ದಾರ್ ಹಾಗೂ ಶಾಸಕರಿಗೆ ಎo. ಸುಬ್ರಮಣ್ಯ ಭಟ್ ಲಿಖಿತ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು