11:49 PM Wednesday21 - October 2020
ಬ್ರೇಕಿಂಗ್ ನ್ಯೂಸ್

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿಗೆ ಬಲಿಯಾದ ಮೂಡಬಿದಿರೆಯ ಶಿಕ್ಷಕಿ

October 16, 2020, 10:58 AM

ಮೂಡಬಿದಿರೆ(Reporter Karnataka News)

ಕೊರೊನಾ ಸೋಂಕಿಗೆ ತುತ್ತಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮೂಡುಬಿದ್ರೆ ಶಿಕ್ಷಕಿ ಪದ್ಮಾಕ್ಷಿ ಎನ್. ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶಿಕ್ಷಕಿ ಸಾವು – ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಈ ನಡುವೆ, ಸರಕಾರದ ವಿದ್ಯಾಗಮ ಯೋಜನೆಯಿಂದಾಗಿ ತಾಯಿ ಕೊರೋನಾಗೆ ತುತ್ತಾಗಿದ್ದಾರೆಂದು ಪುತ್ರಿ ಜಾಲತಾಣದಲ್ಲಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದರು. ಸಿಎಂ ಯಡಿಯೂರಪ್ಪ ಶಿಕ್ಷಕಿಯ ಸಂಪೂರ್ಣ ಚಿಕಿತ್ಸೆ ಭರಿಸುವುದಾಗಿ ಭರವಸೆ ನೀಡಿದ್ದರು.

ಅ.13ರಂದು ಶಿಕ್ಷಕಿಯ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದ್ದಾಗಿ ಆಸ್ಪತ್ರೆಯಿಂದ ತಿಳಿಸಲಾಗಿತ್ತು.‌

ಆದರೆ, ಕೊರೊನಾ ಬಳಿಕ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಈಗ ಸಾವನ್ನಪ್ಪಿದ್ದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೂಡಬಿದ್ರೆಯ ಮಕ್ಕಿ ಜವಹಾರಲಾಲ್ ನೆಹರು ಮೆಮೋರಿಯಲ್ ಪ್ರೌಢಶಾಲೆಯಲ್ಲಿ ಪದ್ಮಾಕ್ಷಿ ಶಿಕ್ಷಕಿಯಾಗಿದ್ದರು. ಅವರ ಪತಿ ಶಶಿಕಾಂತ್ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದರು.‌ ಇದೇ ವೇಳೆ, ಚಿಕಿತ್ಸೆಗೆ ಹಣವಿಲ್ಲ ಎಂದು ಪುತ್ರಿ ಐಶ್ವರ್ಯಾ ಜೈನ್ ಫೇಸ್ ಬುಕ್ ನಲ್ಲಿ ಅಳಲು ತೋಡಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು