1:00 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಕೊರೊನಾ ಪರೀಕ್ಷೆಗೆ ಒಪ್ಪದಿದ್ದರೆ 3 ವರ್ಷ ಜೈಲು, 50 ಸಾವಿರ ದಂಡ !!

October 7, 2020, 11:35 AM

ಬೆಂಗಳೂರು (reporter Karnataka News)

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ರಾಜ್ಯ ಸರ್ಕಾರ ಮನಸ್ಸು ಮಾಡಿದೆ.

ಕೊರೊನಾ ಪರೀಕ್ಷೆಗೆ ಒಪ್ಪದಿದ್ದರೆ ಇನ್ನು ಮುಂದೆ ದಂಡ ಹಾಗೂ ಜೈಲು ಶಿಕ್ಷೆಯನ್ನು ಘೋಷಿಸಿರುವ ಸರಕಾರ ಈ ಕುರಿತಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

50 ಸಾವಿರ ದಂಡ, 3ವರ್ಷ ಜೈಲು
ಯಾರಿಗೆ ಕೋವಿಡ್-19 ಪರೀಕ್ಷೆಗೆ ಒಳಪಡಲು ಸೂಚಿಸಲಾಗುತ್ತದೆಯೋ ಅಂತಹವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆಗೆ ನಿರಾಕರಿಸುವಂತಿಲ್ಲ. ಒಂದು ವೇಳೆ ಪರೀಕ್ಷೆ ಮಾಡಿಸಿಕೊಳ್ಳುವುದಿಲ್ಲ ಎಂದರೆ 3 ವರ್ಷ ಜೈಲು ಅಥವಾ 50 ಸಾವಿರ ದಂಡದ ಶಿಕ್ಷೆ ವಿಧಿಸಲಾಗುತ್ತದೆ. ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.


ರೋಗ ಹರಡುವಿಕೆ ತಡೆಯುವ ಉದ್ದೇಶದಿಂದ ಕೊರೊನಾ ಸೋಂಕಿತರು ಹಾಗೂ ಸೋಂಕು ಶಂಕಿತರನ್ನು ಗುರುತಿಸಲಾಗುತ್ತಿದೆ. ಉಸಿರಾಟ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವ ರೋಗಿಗಳು, ಕೊರೋನಾ ಚಿಕಿತ್ಸೆಯಲ್ಲಿ ತೊಡಗಿರುವ ಸಿಬ್ಬಂದಿ, ಆರೋಗ್ಯ ಸೇವಾ ಕ್ಷೇತ್ರದ ಕಾರ್ಯಕರ್ತರು, ಕಂಟೈನ್ ಮೆಂಟ್, ಬಫರ್ ವಲಯದಲ್ಲಿರುವ ವ್ಯಕ್ತಿಗಳು, ಆರೋಗ್ಯ ಸಿಬ್ಬಂದಿ ಗುರುತಿಸಲ್ಪಡುವ ಯಾವುದೇ ವ್ಯಕ್ತಿ ಅಥವಾ ಕೊರೋನಾ ಶಂಕಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ .

ಇತ್ತೀಚಿನ ಸುದ್ದಿ

ಜಾಹೀರಾತು