ಇತ್ತೀಚಿನ ಸುದ್ದಿ
ಕೊರೊನಾ ಆಸ್ಪತ್ರೆಯಲ್ಲಿ ಬೆಂಕಿ: 8 ಮಂದಿ ಕೊರೋನಾ ರೋಗಿಗಳು ಬಲಿ
August 6, 2020, 3:22 AM

ಅಹ್ಮದಾಬಾದ್(reporterkarnataka new):
ಗುಜರಾತಿನ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ದಾರುಣ ಘಟನೆ ಸಂಭವಿಸಿದೆ. ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಎಂಟು ಮಂದಿ ರೋಗಿಗಳು ಮೃತಪಟ್ಟಿದ್ದಾರೆ.
ಇವರು ಕೊರೋನಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಮೂವರು ಮಹಿಳೆಯರು ಮತ್ತು ಐದು ಮಂದಿ ಮೃತಪಟ್ಟಿದ್ದಾರೆ. ಮುಂಜಾನೆ 3.30ರ ಹೊತ್ತಿಗೆ ತುರ್ತು ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಆಸ್ಪತ್ರೆಯ ಇತರ ಪ್ರದೇಶಗಳಿಗೆ ಹರಡಿತ್ತು ಎಂದು ವರದಿಯಾಗಿದೆ.
ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ..