11:46 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಕೋವಿಡ್ 19 ಸೊಂಕು ನಿರೋಧಕ ಲಸಿಕೆ ಜನವರಿ 16 ರಿಂದ ಅಧಿಕೃತವಾಗಿ ಆರಂಭ

January 13, 2021, 9:46 AM

ಮಂಗಳೂರು (reporterkarnataka news):  ಕೋವಿಡ್ 19 ಸೊಂಕು ನಿರೋಧಕ ಲಸಿಕೆಯನ್ನು ಜನವರಿ 16 ರಿಂದ ಅಧಿಕೃತವಾಗಿ ಆರಂಭವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ ಹೇಳಿದರು.
ಇಂದು ತಾಲೂಕು ಚಾಲನಾ ಸಮಿತಿ ಸಭೆಯನ್ನು ಮಿನಿ ವಿಧಾನಸೌಧ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಉಪ ತಹಶೀಲ್ದಾರ್ ಜಯಂತ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಯಿತು.
ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ ಮಾತನಾಡಿ,  ಈಗಾಗಲೇ ಡ್ರೈರನ್‍ಕಾರ್ಯಕ್ರಮ ಯಶಸ್ವಿಯಾಗಿದ್ದು, ಜಿಲ್ಲೆಯಲ್ಲಿ ವೆನ್‍ಲಾಕ್ ಆಸ್ಪತ್ರೆ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕು ಆಸ್ಪತ್ರೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ(ಸುರತ್ಕಲ್)ದಲ್ಲಿ ಕೋವಿಡ್ ಲಸಿಕಾ ಶೇಖರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.
ಒಂದು ಶಿಬಿರದಲ್ಲಿ 100 ನೊಂದಾಯಿತರಿಗೆ ಲಸಿಕೆ ನೀಡಲಾಗುತ್ತದೆ.ಮೊದಲಿಗೆ 1 ಕೋಟಿಯಷ್ಟಿರುವ ಆರೋಗ್ಯ ಸಿಬ್ಬಂದಿ ಹಾಗೂ ಮುಂಚೂಣಿಯಲ್ಲಿರುವ ಕರೋನಾ ಹೋರಾಟಗಾರರಿಗೆ ಲಸಿಕೆ ನೀಡಲಾಗುವುದು. ನಂತರ ಆರೋಗ್ಯ ಸಮಸ್ಯೆ ಹೊಂದಿರುವ ಹಾಗೂ 50 ವರ್ಷಕ್ಕಿಂತ ಮೇಲ್ಪಟ್ಟ ಸುಮಾರು 26 ಕೋಟಿಜನರಿಗೆಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಲಸಿಕೆ ಪಡೆಯುವ ಮೊದಲು ಕೋವಿನ್ ಆ್ಯಪ್‍ನಲ್ಲಿ ನೊಂದಾಯಿತರಾಗಿರಬೇಕು. ಅದರಂತೆ ನೊಂದಾಯಿತ ವ್ಯಕ್ತಿಯು ಲಸಿಕೆ ಪಡೆಯುವ ದಿನಾಂಕ ಹಾಗೂ ಗುರುತಿನ ಸಂದೇಶವನ್ನು ಪಡೆದುಕೊಳ್ಳಬೇಕು ಎಂದರು.
ಆರೋಗ್ಯ ಸಿಬ್ಬಂದಿ ವರ್ಗದಲ್ಲಿ ನರ್ಸ್ ಮತ್ತು ಸುಪರ್‍ವೈಸರ್, ಮೆಡಿಕಲ್ ಮತ್ತು ಪ್ಯಾರಾ ಮೆಡಿಕಲ್, ಕ್ಲಿನಿಕ್, ಲ್ಯಾಬೋರೇಟರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾ ಅವಕಾಶ ಕಲ್ಪಿಸಲಾಗಿದೆ ಎಂದರು.
ಮತದಾನ ಪ್ರಕ್ರಿಯೆಯಂತೆ ಕೋವಿಡ್ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ನಿರೀಕ್ಷಣಾ ಕೊಠಡಿ, ಲಸಿಕಾ ಕೊಠಡಿ ಹಾಗೂ ನಿಗಾ ಕೊಠಡಿ ಎಂಬ ಮೂರು ಕೊಠಡಿಗಳನ್ನು ರಚಿಸಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ವೆರೆಗೆ ಲಸಿಕೆ ನೀಡಲಾಗುತ್ತದೆ. ಲಸಿಕೆ ಹಂಚಿಕೆಯ ಸಂದರ್ಭದಲ್ಲಿ ಲಸಿಕೆ ಪಡೆಯುವವರ ಮಾಹಿತಿ, ಲಸಿಕೆ ಹಾಕುವ ಹಾಗೂ ಲಸಿಕೆ ಹಾಕಿದ ನಂತರಅರ್ಧಗಂಟೆ ನಿಗಾ ಘಟಕದಲ್ಲಿರುವಂತೆ ಪೂರ್ವತಯಾರಿ ಮಾಡಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಪ್ರತಿಭಾ,  ಇತರೆ ಇಲಾಖಾಧಿಕಾರಿಗಳು ಮತ್ತು ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಲಿಯಮ್ಮ ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು