5:14 PM Tuesday19 - January 2021
ಬ್ರೇಕಿಂಗ್ ನ್ಯೂಸ್
ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ

ಇತ್ತೀಚಿನ ಸುದ್ದಿ

ಕೋವಿಡ್‌ ಆರೈಕೆ ಕೇಂದ್ರದ ನೋಡಲ್‌ ಅಧಿಕಾರಿ ಸಾವು

August 9, 2020, 4:15 AM

ಬೆಂಗಳೂರು(reporter Karnataka)

ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಆರಂಭಿಸಿರುವ ಕೋವಿಡ್‌ ಆರೈಕೆ ಕೇಂದ್ರದ ನೋಡಲ್‌ ಅಧಿಕಾರಿಯಾಗಿದ್ದ ಪ್ರೊಬೇಷನರಿ ಉಪವಿಭಾಗಾಧಿಕಾರಿ ಎಚ್‌.ಎಂ.ಗಂಗಾಧರಯ್ಯ (45) ಅವರು ಹೃದಯಾಘಾತದಿಂದಾಗಿ ಶನಿವಾರ ನಿಧನರಾಗಿದ್ದಾರೆ.

ಗಂಗಾಧರಯ್ಯ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಡಿ.ಹೊಸಹಳ್ಳಿ ಗ್ರಾಮದವರು.

ಕೋವಿಡ್ ಇರಲಿಲ್ಲ:
ಮಾಜಿ ಸೈನಿಕರ ಕೋಟದಲ್ಲಿ ಇತ್ತೀಚೆಗಷ್ಟೇ ಉಪವಿಭಾಗಾಧಿಕಾರಿಯಾಗಿ ಸರ್ಕಾರಿ ಸೇವೆಗೆ ಸೇರಿದ್ದರು. ಅವರನ್ನು ಬಿಐಇಸಿ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅವರಿಗೆ ಸಂಜೆ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಸಪ್ತಗಿರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

₹ 25 ಲಕ್ಷ ಪರಿಹಾರ ಘೋಷಣೆ :
ಗಂಗಾಧರಯ್ಯ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹ 25 ಲಕ್ಷ ಪರಿಹಾರ ನೀಡಲಾಗುತ್ತದೆ. ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡಲಾಗುತ್ತದೆ. ಅವರ ಅಂತ್ಯಕ್ರಿಯೆಯಯನ್ನು ಪೊಲೀಸ್‌ ಗೌರವದೊಂದಿಗೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು