10:03 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಕೋವಿಡ್ ಸಂದರ್ಭ ಗಮನಾರ್ಹ ಸೇವೆ ಸಲ್ಲಿಸಿದ ಜಿಲ್ಲಾಸ್ಪತ್ರೆಗಳಿಗೆ ಉನ್ನತ ಮಟ್ಟದ ಮೂಲಭೂತ ಸೌಲಭ್ಯ

November 26, 2020, 9:35 AM

ಕೋಲಾರ(reporterkarnataka news) : ಕೋವಿಡ್ ಸಂದರ್ಭದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಜಿಲ್ಲಾಸ್ಪತ್ರೆಗೆ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತದಲ್ಲಿ ಉನ್ನತ ಮಟ್ಟದಲ್ಲಿ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಅಬಕಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್. ನಾಗೇಶ್  ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , ಕೋಲಾರ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತವನ್ನು ಗಣಿ ಬಾದಿತ ಗ್ರಾಮಗಳಲ್ಲಿ ವಿನಿಯೋಗಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . 

15-20 ವರ್ಷಗಳ ಹಿಂದೆ ನಿರ್ಮಿಸಿರುವ ಕೋಲ್ಡ್ ಸ್ಟೋರೆಜ್‌ನ್ನು ನವೀಕರಿಸಬೇಕು . ಜಿಲ್ಲೆಯಲ್ಲಿ ಅನೇಕ ಜನರು ಕಲ್ಲು ಒಡೆಯುವ ವೃತ್ತಿಯಲ್ಲಿ ತೊಡಗಿಕೊಂಡಿದ್ದು , ಎಲ್ಲರೂ ಬಡವರು ಆಗಿದ್ದಾರೆ . ಅದ್ದರಿಂದ ಅವರಿಗೆ ಕ್ಷೇತ್ರವಾರು ಪರವಾನಗಿ ನೀಡಿದರೆ ಅವರ ಜೀವನೋಪಾಯಕ್ಕೆ ಆಧಾರವಾಗುತ್ತದೆ ಎಂದು ತಿಳಿಸಿದರು . 

ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್ ಮುನಿಸ್ವಾಮಿ ಅವರು ಮಾತನಾಡಿ , ಜಿಲ್ಲೆಯಲ್ಲಿ ಕಲ್ಲು ಒಡೆಯುವ ಕೆಲಸದಲ್ಲಿ ತೊಡೆದುಕೊಂಡಿರವರ ಬಗ್ಗೆ ಸರ್ವೆ ಮಾಡಬೇಕು. ಪರವಾನಗಿ ನೀಡುವ ಸಂದರ್ಭದಲ್ಲಿ ಮೊದಲ ಆದ್ಯತೆಯನ್ನು ಜಿಲ್ಲೆಯ ಜನರಿಗೆ ನೀಡಬೇಕು. ತಮಿಳುನಾಡು ಮತ್ತು ಆಂಧ್ರದಿಂದ ಬಂದು ಅನಧಿಕೃತ ಗ್ರಾನೈಟ್ ಮಾರಾಟ ಮಾಡುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಭೂ ವಿಜ್ಞಾನಿ ಅಧಿಕಾರಿಗೆ ಸೂಚಿಸಿದರು . 

ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ ಅವರು ಮಾತನಾಡಿ ಸರ್ಕಾರದಿಂದ ಕೋವಿಡ್‌ಗೆ ಫಂಡ್ ಅಂತ ಯಾವುದೇ ವಿಶೇಷ ಅನುದಾನ ಬರುವುದಿಲ್ಲ . ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತದಲ್ಲಿ ಕೋವಿಡ್ ನಿರ್ವಹಣೆಗೆ ಶೇ.

30ರಷ್ಟು ಹಣವನ್ನು ಮೀಸಲಿಡಲಾಗಿದೆ . ಜಿಲ್ಲಾಸ್ಪತ್ರೆಗೆ ಕಾಂಪೌಂಡ್ ಅತ್ಯಂತ ಅವಶ್ಯಕವಾಗಿದ್ದು , ಸಂಸದರ ಮತ್ತು ಶಾಸಕರ ನಿಧಿಯಿಂದ ಕಾಂಪೌಂಡ್ ನಿರ್ಮಾಣವಾಗಬೇಕು . ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ವೈದ್ಯರಿದ್ದು , ರೋಗಿಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ . ಕೋವಿಡ್ ಸಂದರ್ಭದಲ್ಲಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ ಎಂದು ತಿಳಿಸಿದರು . ಸಭೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀನಿವಾಸಗೌಡ , ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ನಂಜೇಗೌಡ , ಕೆ.ಜಿ.ಎಫ್ . ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಕಲಾ ಶಶಿಧರ್ , ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು , ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿ.ಎಸ್.ವೆಂಕಟೇಶ್ , ಅಪರ ಜಿಲ್ಲಾಧಿಕಾರಿಗಳಾದ ಸ್ನೇಹಾ , ಸೇರಿದಂತೆ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು