ಇತ್ತೀಚಿನ ಸುದ್ದಿ
ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರ ದಾಳಿ: ಹುತಾತ್ಮರಾದ ಇಬ್ಬರು ಸೈನಿಕರು, 3 ಮಂದಿ ಗಾಯ
October 5, 2020, 3:49 PM

ಶ್ರೀನಗರ: ಶ್ರೀನಗರ ಹೊರವಲಯದ ಪೊಂಪೆಂರ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಮೂವರು ಯೋಧರು ಗಾಯಗೊಂಡಿದ್ದಾರೆ. ಉಗ್ರರ ದಾಳಿಯಲ್ಲಿ ಗಾಯಗೊಂಡ ಯೋಧರನ್ನು
ಶ್ರೀನಗರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಗರ ಹೊರವಲಯದಲ್ಲಿರುವ ಪೊಂಪೇರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಜಮ್ಮು ಶ್ರೀನಗರ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಇಡೀ ಪ್ರದೇಶವನ್ನು ಭದ್ರತಾಪಡೆ ಸುತ್ತುವರಿದಿದೆ.