7:01 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಕಟ್ ಆ್ಯಂಡ್ ಪೇಸ್ಟ್ ಜರ್ನಲಿಸಂ ಬೇಡ, ತನಿಖಾ ಪತ್ರಿಕೋದ್ಯಮ ಇರಲಿ: ಜಿಲ್ಲಾಧಿಕಾರಿ

November 24, 2020, 7:08 PM

ಮಂಗಳೂರು(reporterkarnataka news) : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. 

ನೀರ ನಡುವೆ, ಅಬ್ಬಕ್ಕ  ಕ್ವೀನ್ ಕ್ರೂಸ್‌ನಲ್ಲಿ ಸುಂದರ ವಾತಾವರಣದಲ್ಲಿ ವಿನೂತನವಾಗಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು. 

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಜರ್ನಲಿಸಂನಲ್ಲಿ ಕಟ್ ಆಂಡ್ ಪೇಸ್ಟ್ ಜರ್ನಲಿಸಂ ಸರಿಯಲ್ಲ. ತನಿಖಾ ಪತ್ರಿಕೋದ್ಯಮ, ವಸ್ತುನಿಷ್ಠ ವರದಿಯನ್ನು ಮಾಡುವುದು ಬಹಳ ಮುಖ್ಯ ಮಂದಿನ ಸವಾಲಿನ ದಿನಗಳಲ್ಲಿ ವಸ್ತುನಿಷ್ಠ ವರದಿಯು ಬಹಳ ಮುಖ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. 

ಮಂಗಳೂರಿನ ಕಡಲ ತೀರದ , ನದಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಗೆ ವಿಶೇಷ ಕ್ರಮ ಕೈ ಗೊಳ್ಳಲಾಗುವುದು ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು, ಪತ್ರಕರ್ತರು ಎಂದರೆ ಸತ್ಯವನ್ನು ಸಮಾಜಕ್ಕೆ ತೋರಿಸುವವರು. ಸಮಾಜದಲ್ಲಿ ಆಗುವ ತಪ್ಪುಗಳನ್ನು ಸರಿಪಡಿಸುವಂತಹವರು ಪತ್ರಕರ್ತರು. ಕೆಲವೊಂದು  ಗೊತ್ತಿಲ್ಲದೆ ತಪ್ಪುಗಳಾದ ಸಂದರ್ಭದಲ್ಲಿ ಎಚ್ಚರಿಸಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಹೇಳಿದರು. 

ಮಂಗಳೂರು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಹೊಸ ಯೋಜನೆಯನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ವೇಳೆ ಹಿರಿಯ ಪತ್ರಕರ್ತರಾದ  ರಿಚರ್ಡ್ ಲಸ್ರಾದೋ, ಜನಾರ್ಧನ ಎಸ್. ಪುರಿಯ, ಆರ್.ಎನ್. ಪೂವಣಿ ಉಜಿರೆ, ರಾಜಾ ಬಂಟ್ವಾಳ್, ಹಮೀದ್ ವಿಟ್ಲ, ಜಯಪ್ರಕಾಶ್ ಕುಕ್ಕೇಟಿ, ಯು.ಎಲ್. ಉದಯಕುಮಾರ್ ಮತ್ತು ವಿ4 ನ್ಯೂಸ್‌ನ ಆಡಳಿತ ನಿರ್ದೇಶಕರಾದ ಲಕ್ಷ್ಮಣ್ ಕುಂದರ್ ಅವರನ್ನು ಜಿಲ್ಲಾಧಿಕಾರಿ, ಶಾಸಕರು ಸಹಿತ ಅತಿಥಿಗಳು ಸನ್ಮಾನಿಸಿದರು. 

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರು ಸಮಿತಿಯು ಬೆಳೆದುಬಂದ ಹಾದಿಯ ಬಗ್ಗೆ ವಿವರಿಸಿದರು. 

ಕಾರ್ಯಕ್ರಮದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ರಾಜ್ಯ  ಅಧ್ಯಕ್ಷ ಬಿ. ನಾರಾಯಣ, ಕೆಜೆಯು ಬೆಂಗಳೂರು ಗೌರವಾಧ್ಯಕ್ಷ ಕೆ.ವಿ. ರಾಜೇಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿ ನರೇಂದ್ರನಾಥ್, ಕಾರ್ಯದರ್ಶಿ ರಾಘವೇಂದ್ರ ಕೆಸವಳಲು, ಉಪಾಧ್ಯಕ್ಷ ಈ.ಟಿ.ಕೇರ್ ರಾಜು, ಕೆಜೆಯು ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಜಯಕುಮಾರ್ ಕೆ., ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾ ಸಮಿತಿಯ ಕೋಶಾಧಿಕಾರಿ ಜ್ಯೋತಿಪ್ರಕಾಶ್ ಪುಣಚ, ಜೊತೆ ಕಾರ್ಯದರ್ಶಿ ಈಶ್ವರ ವಾರಣಾಸಿ, ಉಪಾಧ್ಯಕ್ಷ ಗಿರಿಧರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ , ಗೌತಮ್ ಶೆಟ್ಟಿ ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು. 

ಕೆಜೆಯು ದ.ಕ. ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಕಾರ್ಯಕ್ರಮ ನಿರ್ವಹಿಸಿದರು, ಕೆನ್ಯೂಟ್ ಪಿಂಟೋ ಸನ್ಮಾನಿತರ ಪರಿಚಯ ಮಾಡಿದರು,  ಜ್ಯೋತಿ ಪ್ರಕಾಶ್ ಪುಣಚ ವಂದಿಸಿರು

 ಗೋಷ್ಠಿ :  ಬಳಿಕ ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್ ಡಾ. ಚಂದ್ರ ಪೂಜಾರಿ ಅವರಿಂದ ಅಭಿವ್ಯಕ್ತಿ -ತತ್ವ ಮತ್ತು ಆಚರಣೆ ಎನ್ನುವ ವಿಚಾರದ ಬಗ್ಗೆ ವಿಶೇಷ ಉಪನ್ಯಾಸ ನಡೆಯಿತು. ಈ ಮೂಲಕ ಅಬ್ಬಕ್ಕ ಕ್ವೀನ್ ಕ್ರೂಸ್ ಮೂಲಕ ಮಂಗಳೂರಿನ ಬೊಕ್ಕಪಟ್ಣದಿಂದ ಆರಂಭಿಸಿ ನದಿ-ಕಡಲ ನೀರ ನಡುವಿನ ವಿಹಂಗಮ ವಿಹಾರದ ಜೊತೆಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯು ಸಂಪನ್ನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು