6:04 PM Thursday22 - October 2020
ಬ್ರೇಕಿಂಗ್ ನ್ಯೂಸ್
ನಳಿನ್ ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದ ಪೋಕರಿ: ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಮಂಗಳೂರು ವೆಂಕಟರಮಣ ದೇಗುಲದ ಶಾರದೆಗೆ ಮಹಾಲಕ್ಷ್ಮಿ ಅಲಂಕಾರ ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಭರಪೂರ ಭರವಸೆ ಹುಲಿಯ ಹಲ್ಲು ವಶ: ನಾಲ್ವರು ಆರೋಪಿಗಳ ಬಂಧನ ಆಕ್ಸ್ ಫರ್ಡ್ ಲಸಿಕೆ  ಪ್ರಯೋಗದ ವೇಳೆ ದುರಂತ: ಬ್ರೆಜಿಲ್ ನಲ್ಲಿ ಓರ್ವ ಬಲಿ ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶರನ್ನವರಾತ್ರಿ ಪೂಜೋತ್ಸವ ಇಂದು ಶಿರಾದಲ್ಲಿ ಬಿಜೆಪಿಯಿಂದ ಸಂಸದ ತೇಜಸ್ವಿ ಸೂರ್ಯ ಚುನಾವಣಾ ಪ್ರಚಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹುಟ್ಟು ಹಬ್ಬದ ಸಂಭ್ರಮ ಟಿಆರ್ ಪಿ ಹಗರಣ: ಇಂದು ರಿಪಬ್ಲಿಕನ್ ಪ್ರಿಯಾ ಮುಖರ್ಜಿ ವಿಚಾರಣೆ ಪಚ್ಚನಾಡಿ ತ್ಯಾಜ್ಯ ದುರಂತ: ವರ್ಷದ ಬಳಿಕ  ರಾಜ್ಯ ಸರಕಾರದಿಂದ 14 ಕೋಟಿ ಪರಿಹಾರ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡದಲ್ಲಿ ಮತ್ತೆ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ, ಮೀನುಗಾರರಿಗೆ ಎಚ್ಚರಿಕೆ

September 19, 2020, 7:45 PM

ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಒಂದು ವಾರ ಹಿಂದೆಯಷ್ಟೇ ಭಾರಿ ಮಳೆಯಾಗಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಇದೀಗ ಮತ್ತೆ ಮುಂಗಾರು ಚುರುಕುಗೊಂಡು ಭಾರಿ ಮಳೆಯಾಗುತ್ತಿದೆ. 

ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಬಂಗಾಳ ಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಪ್ರದೇಶದಲ್ಲಿ ದಟ್ಟ ಮೋಡ ಆವರಿಸಿದೆ. ಮುಂದಿನ ಮೂರು ದಿನಗಳ ಕಾಲ ಭಾರಿಯಿಂದ ಅತೀ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇದರಿಂದ ಮೂರು ದಿನಗಳ ಕಾಲ ರೆಡ್ ಅಲರ್ಟ್ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಡಾ. ಎಸ್.ಎಸ್.ಎಂ. ಗಾವಸ್ಕರ್ ಅವರು ಶನಿವಾರ ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನದಿ ತಟದ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ಕೇಂದ್ರ ಸ್ಥಾನದಲ್ಲಿ ಇರುವಂತೆ ನಿರ್ದೇಶನ ನೀಡಲಾಗಿದೆ. ಯಾವುದೇ ವಿಪತ್ತಿನ ಪರಿಸ್ಥಿತಿ ಎದುರಾದರೆ ತಕ್ಷಣ ಮೇಲಾಧಿಕಾರಿಗಳಿಗೆ ತಿಳಿಸುವಂತೆ ಪಿಡಿಒಗಳಿಗೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು