12:06 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

2 ದಶಕಗಳ ಬಳಿಕ ಮಂಗಳೂರಿನಲ್ಲಿ ನಡೆಯಲಿರುವ  ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಕಡಲನಗರಿ ಸಜ್ಜು

November 3, 2020, 10:49 PM

ಮಂಗಳೂರು(reporterkarnataka news): ಮಂಗಳೂರಿನಲ್ಲಿ ನವೆಂಬರ್ 5ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಕಡಲನಗರಿ ಮಂಗಳೂರು ಸಜ್ಜುಗೊಂಡಿದೆ. ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನವೆಂಬರ್ 4ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ನಗರದ ಪ್ರಮುಖ ರಸ್ತೆಗಳಿವೆ ಕೇಸರಿ ತೋರಣವನ್ನು ಕಟ್ಟಿ ಪಕ್ಷದ ಧ್ವಜವನ್ನು ರಸ್ತೆಯುದ್ದಕ್ಕೂ ಹಾಕಲಾಗಿದೆ. ನವಭಾರತ ವೃತ್ತವನ್ನು ವಿಶೇಷ ಅಲಂಕಾರ ಮಾಡಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ನ.5ರಂದು ನಗರದಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎರಡು ದಶಕಗಳ ಬಳಿಕ ಮೊದಲ ಬಾರಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಕಡಲನಗರಿಯಲ್ಲಿ ನಡೆಯಲಿದೆ.

ನವೆಂಬರ್ 4ರಂದು ಮುಖ್ಯಮಂತ್ರಿ ಬೆಂಗಳೂರಿನ ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನಿಂದ ವಿಮಾನದ ಮೂಲಕ ರಾತ್ರಿ 7 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮುಖ್ಯಮಂತ್ರಿಯವರು ರಾತ್ರಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡುವರು. ನ. 5ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯುವ ರಾಜ್ಯ ಬಿಜೆಪಿ ವಿಶೇಷ ಸಭೆಯನ್ನು ಉದ್ಘಾಟಿಸುವರು. ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರ ವರೆಗೆ ಓಶಿಯನ್ ಪರ್ಲ್ ನಲ್ಲಿ ನಡೆಯುವ ಬಿಜೆಪಿ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 2.30ರಿಂದ ಸಂಜೆ 5ರ ತನಕ ಟಿವಿ ರಮಣ್ ಪೈ ಹಾಲ್ ನಲ್ಲಿ ನಡೆಯುವ ಬಿಜೆಪಿ ವಿಶೇಷ ಸಭೆಯಲ್ಲಿ ಭಾಗವಹಿಸುವರು. ರಾತ್ರಿ 7.35ಕ್ಕೆ ಮಂಗಳೂರು ಏರ್ ಪೋರ್ಟ್ ನಿಂದ ಬೆಂಗಳೂರಿಗೆ ನಿರ್ಗಮಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು