ಇತ್ತೀಚಿನ ಸುದ್ದಿ
ಡಿಸೆಂಬರ್ 5 ರಾಜ್ಯ ಬಂದ್: ಕನ್ನಡ ಪರ ಸಂಘಟನೆಗಳ ಸಭೆ
November 25, 2020, 12:34 PM

ಬೆಂಗಳೂರು(reporterkarnataka news): ರಾಜ್ಯ ಸರ್ಕಾರ ಕನ್ನಡ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಕುರಿತಂತೆ ಇಂದು ಕನ್ನಡ ಸಂಘಟನೆಗಳ ನಾಯಕರು ಚರ್ಚೆ ನಡೆಸಲಿದ್ದಾರೆ.
ಡಿಸೆಂಬರ್ 5ರಂದು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಕರೆಗೆ ಕೆಲವು ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಿದೆ.