ಇತ್ತೀಚಿನ ಸುದ್ದಿ
ಡಿಸೆಂಬರ್ ಅಂತ್ಯದ ತನಕ ರಾಜ್ಯದಲ್ಲಿ ಶಾಲೆ ಆರಂಭ ಇಲ್ಲ: ಯಡಿಯೂರಪ್ಪ ಸರಕಾರ ನಿರ್ಧಾರ
November 23, 2020, 2:30 PM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಡಿಸೆಂಬರ್ ಅಂತ್ಯದ ತನಕ ಶಾಲೆ ಆರಂಭಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನಲ್ಲಿ ಇದನ್ನು ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿ ಪರಿಗಣಿಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಶಾಲೆ ಆರಂಭ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆ ಬಳಿಕ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.