ಇತ್ತೀಚಿನ ಸುದ್ದಿ
ದೀಪಿಕಾ ಪಡುಕೋಣೆ ಮ್ಯಾನೇಜರ್ ಗೆ ಎನ್ ಸಿ ಬಿ ನೋಟಿಸ್: ಕಾರಣ ಏನು ಗೊತ್ತೇ?
September 22, 2020, 4:13 PM

ಮುಂಬೈ(reporterkarnataka news): ಮಾದಕ ದ್ರವ್ಯದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ದಳದ ಅಧಿಕಾರಿಗಳು ಖ್ಯಾತ ಹಿಂದಿ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಗೆ ಸಮನ್ಸ್ ಜಾರಿ ಮಾಡಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ಕೆಲವು ಡ್ರಗ್ಸ್ ಪೆಡ್ಲರ್ ಗಳ ವಿಚಾರಣೆ ಸಂದರ್ಭದಲ್ಲಿ ಹಿಂದಿ ಚಿತ್ರರಂಗದ ಪ್ರತಿಷ್ಠಿತ ತಾರೆಯರ ಹೆಸರು ಹೇಳಿರುವ ಕಾರಣ ನೋಟಿಸ್ ಜಾರಿ ಮಾಡಲಾಗಿದೆ. ದೀಪಿಕಾ ಪಡುಕೋಣೆ ಕೂಡ ಎನ್ ಸಿ ಬಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ