ಇತ್ತೀಚಿನ ಸುದ್ದಿ
ದೆಹಲಿ ತಲುಪಿದ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಸಾಧ್ಯವೇ?
September 17, 2020, 10:21 PM

ನವದೆಹಲಿ(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿ ತಲುಪಿದ್ದು, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಕಾರ್ಯಕ್ರಮವಿದೆ. ಆದರೆ ಪ್ರಧಾನಿ ಭೇಟಿಗೆ ಅವಕಾಶ ಸಿಗುವ ಕುರಿತು ಇದುವರೆಗೆ ಯಾವುದೇ ಸೂಚನೆ ಕಂಡು ಬಂದಿಲ್ಲ.
ಕೊರೊನಾ ವೈರಸ್, ಭಾರತ- ಚೀನಾ ಗಡಿ ಉದ್ವಿಗ್ನತೆ ಹಾಗೂ ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿಗೆ ಅವಕಾಶ ಸಿಗುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.
ಈ ನಡುವೆ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಕಸರತ್ತು ಆರಂಭವಾಗಿದೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಾಸಕ ರೇಣುಕಾಚಾರ್ಯ ಕೂಡ ಇದೀಗ ದೆಹಲಿ ತಲುಪಿದ್ದಾರೆ ದೆಹಲಿ ತಲುಪಿರುವ ಯಡಿಯೂರಪ್ಪ ಪಕ್ಷದ ಹಿರಿಯ ನಾಯಕರ ಜತೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯುವ ಸಾಧ್ಯತೆಗಳಿವೆ.