ಇತ್ತೀಚಿನ ಸುದ್ದಿ
ದೆಹಲಿಯಲ್ಲಿ ಕಮಲದ ಕೈ ಹಿಡಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ
August 25, 2020, 8:51 AM

ನವದೆಹಲಿ(reporterkarnataka news): ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರಿದರು. ಪಕ್ಷದ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತಮಿಳುನಾಡಿನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಗಣ್ಯರು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಮುರಳೀಧರ ರಾವ್ ಹೇಳಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದರಾದ ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಅಣ್ಣಾ ಮಲೈ ಬಿಜೆಪಿ ಸೇರ್ಪಡೆಯನ್ನು ಸ್ವಾಗತಿಸಿದ್ದಾರೆ.