11:43 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ದೆಹಲಿ ಚಲೋ: ಡಿಸೆಂಬರ್ 31ರಂದು ಕೋಲಾರ ಜಿಲ್ಲೆಯಿಂದ 300 ಮಂದಿ ರೈತರು ದಿಲ್ಲಿಗೆ

December 26, 2020, 8:23 PM

ಕೋಲಾರ(reporterkarnataka news) : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿ ಚಲೋ ಹೊರಟಿರುವ ಪಂಜಾಬ್, ಹರಿಯಾಣ ರೈತರ ಹೋರಾಟಕ್ಕೆ ಬೆಂಬಲಿಸಿ ಡಿಸೆಂಬರ್ 31ರಂದು ಕೋಲಾರ ಜಿಲ್ಲೆಯಿಂದ 300 ಮಂದಿ ರೈತರು ದೆಹಲಿ ಚಲೋ ಹೊರಡಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದಲ್ಲಿ ಶನಿವಾರ ನಡೆದ ಸಭೆಯ ನೇತೃತ್ವವಹಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೇಂದ್ರ ಸರ್ಕಾರವು ಜನಾಭಿಪ್ರಾಯವಿಲ್ಲದೆ ಜಾರಿಗೆ ತಂದಿರುವ ಕಾಯಿದೆಗಳನ್ನು ವಿರೋಧಿಸಿ ದೆಹಲಿ ಚಲೋ ಹೊರಟಿರುವ ಪಂಜಾಬ್, ಹರಿಯಾಣ ರೈತರು 1 ತಿಂಗಳಿಂದ ನಿರಂತರ ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರ್ಕಾರ ತನ್ನ ಕಾಯಿದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆಯೇ ಹೊರತು ಇದರ ಬಗ್ಗೆ ಚರ್ಚೆ ಮಾಡಲು ಚಕಾರವೆತ್ತದೆ ಕಾರ್ಪೋರೇಟ್ ಕಂಪನಿಗಳಿಗೆ ಕೃಷಿ ಕ್ಷೇತ್ರವನ್ನು ಅಡ ಇಡಲು ಮುಂದಾಗಿರುವುದು ಸರಿಯಲ್ಲ ಎಂದು ಖಂಡಿಸಿದರು.

ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ದೇಶದ 9 ಕೋಟಿ ರೈತರಿಗೆ 18 ಸಾವಿರ ಕೋಟಿರೂಗಳನ್ನು ಪ್ರಧಾನ ಮಂತ್ರಿ ಯೋಜನೆಯಡಿ ನೀಡಿರುವುದು ಸ್ವಾಗತಾರ್ಹದ ಸಂಗತಿಯಾಗಿದೆ. ಆದರೆ ಒಂದು ಎಕರೆ ಟೊಮೆಟೊ ಬೆಳೆಯಲು ಒಂದೂವರೆ ಲಕ್ಷರೂ ಬಂಡವಾಳ ಅಗತ್ಯವಿದ್ದು, ಇಂತಹ ಪರಿಸ್ಥಿತಿಯಲ್ಲಿ ವೈಜ್ಞಾನಿಕ ಬೆಲೆ ನಿಗಧಿಪಡಿಸುವುದು ಅಗತ್ಯವಾಗಿತ್ತು.

ವಿಶೇಷ ಸಂಸತ್ ಅಧಿವೇಶವನ್ನೂ ನಡೆಸದೆ ಏಕಾಏಕಿ ಕೃಷಿ ಕಾಯಿದೆಗಳನ್ನು ಜಾರಿಗೆ ತಂದಿರುವುದನ್ನು ಖಂಡಿಸಿ ಹಾಗೂ ದೆಹಲಿ ಚಲೋ ಹೊರಟಿರುವ ರೈತರ ಹೋರಾಟವನ್ನು ಬೆಂಬಲಿಸಿ ಡಿ.31ರಂದು ಕೋಲಾರ ಜಿಲ್ಲೆಯ 300 ರೈತರು ದೆಹಲಿ ಚಲೋ ಹೊರಡಲು ತೀರ್ಮಾನಿಸಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐತಾಂಡಹಳ್ಳಿ ಮುನ್ನಾ, ಬಂಗಾರಪೇಟೆ ತಾಲೂಕು ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ಸ್ವಸ್ತಿಕ್ ಶಿವು, ಚಾಂದ್‍ಪಾಷ, ಕಿರಣ್, ಶೇಖ್ ಬಾಬಾಜಾನ್, ನವಾಜ್‍ಪಾಷ, ಘೌಸ್ ಪಾಷ, ಜಾವೀದ್, ಸುಹೇಲ್ ಪಾಷ, ಜಮೀರ್ ಪಾಷ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು