ಇತ್ತೀಚಿನ ಸುದ್ದಿ
ದೆಹಲಿಯಲ್ಲಿ ತೀವ್ರಗೊಂಡ ಪ್ರತಿಭಟನೆ: ಟ್ರ್ಯಾಕ್ಟರ್ ಗಳಿಗೆ ಬೆಂಕಿ, ರಾಜಧಾನಿಯತ್ತ ರೈತರು ದಂಡು
September 28, 2020, 11:34 AM

ನವದೆಹಲಿ(reporterkarnataka news): ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕೃಷಿ ಕಾನೂನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ತೀವ್ರ ಸ್ವರೂಪ ಪಡೆದುಕೊಂಡಿದೆ. ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲಾಗಿದೆ.
ಉತ್ತರ ಪ್ರದೇಶ ಮತ್ತು ಹರ್ಯಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ದೆಹಲಿಯತ್ತ ಹೊರಟ್ಟಿದ್ದಾರೆ. ಟ್ರ್ಯಾಕ್ಟರ್ ಗಳ ಮೂಲಕ ಪ್ರಯಾಣ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.